ಉಕ್ರೇನ್​ನಿಂದ 22,500 ಮಂದಿಯನ್ನು ಸುರಕ್ಷಿತವಾಗಿ ಕರೆತರುವುದರ ಜೊತೆಗೆ ಇತರೆ 18 ದೇಶಗಳಿಗೂ ಸಹಾಯ ಮಾಡಿದೆ ಭಾರತ

ಉಕ್ರೇನ್:

ರಷ್ಯಾ ಹಾಗೂ ಉಕ್ರೇನ್​ ನಡುವಿನ ಯುದ್ಧದಲ್ಲಿ ಅನೇಕ ಮಂದಿ ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರೋದ್ರ ನಡುವೆಯೇ ಭಾರತಕ್ಕೆ ಸುಮಾರು 22,500 ಮಂದಿ ಉಕ್ರೇನ್​ನಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಹೇಳಿದ್ದಾರೆ.ಅಲ್ಲದೇ ಇದು ಇತರೆ 18 ದೇಶಗಳಿಗೂ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

ಉಕ್ರೇನ್​ನಲ್ಲಿ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತವು ಕಳವಳವನ್ನು ಹೊಂದಿದೆ. ಈ ಸಂಘರ್ಷವು ಅನೇಕರ ಸಾವಿಗೆ ಕಾರಣವಾಗಿದೆ. ಸಾವಿರಾರು ಮಂದಿ ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ. ಅನೇಕರು ನಿರಾಶ್ರಿತರಾಗಿದ್ದಾರೆ ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯುದ್ಧ ಪೀಡಿತ ದೇಶದಲ್ಲಿ ಸಿಲುಕಿರುವ ಉಕ್ರೇನ್​ನಿಂದ ನಾಗರಿಕರನ್ನು ಮರಳಿ ಕರೆತರಲು ಭಾರತ ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಫೆಬ್ರವರಿ 24 ರಿಂದ ಕ್ರೆಮ್ಲಿನ್ ಆಕ್ರಮಣವನ್ನು ಪ್ರಾರಂಭಿಸಿದ ನಂತರ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವಾರು ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದಾರೆ. ಪ್ರಧಾನಿಯವರು ರಷ್ಯಾದ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೂ ಮಾತನಾಡಿದ್ದರು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link