ಸಿಡ್ನಿ:
ಭಾರತ–ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 34 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಆಯ್ದುಕೊಂಡ ಆಸ್ಪ್ರೇಲಿಯಾ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 288 ರನ್ ಗಳಿಸಿತು. ಈ ಮೂಲಕ ಆಸ್ಟ್ರೇಲಿಯಾ ತಂಡ ಏಕದಿನ ಕ್ರಿಕೆಟ್ನಲ್ಲಿ 1000ನೇ ಜಯ ದಾಖಲಿಸಿತು.
ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (51) ಸಹ ಅರ್ಧಶತಕ ಬಾರಿಸಿದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ. ಇನ್ನು ರೋಹಿತ್ ಶರ್ಮಾ (133) ಅಮೋಘ ಶತಕದ ಹೊರತಾಗಿಯೂ ಟೀಮ್ ಇಂಡಿಯಾ 34 ರನ್ ಅಂತರದ ಸೋಲಿಗೊಳಗಾಗಿದೆ.
ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-1ರ ಅಂತರ ಹಿನ್ನೆಡೆಗೊಳಗಾಗಿದೆ. ವಿರಾಟ್ ಕೊಹ್ಲಿ ಪಡೆಯೀಗ ಸರಣಿ ವಶಪಡಿಸಿಕೊಳ್ಳಲು ಮುಂದಿನ ಎರಡು ಪಂದ್ಯಗಳಲ್ಲೂ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
