ಮಾಲೆ:
ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ.33ರಷ್ಟು ಇಳಿಕೆಯಾಗಿದೆ.2023ರಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂ.1 ಸ್ಥಾನದಲ್ಲಿತ್ತು.ಈಗ ಅದು 6ನೇ ಸ್ಥಾನಕ್ಕೆ ಕುಸಿದಿದೆ.
ವಿದೇಶಾಂಗ ಸಚಿವಾಲಯದ ಮಾಹಿತಿ ಪ್ರಕಾರ, ಈ ವರ್ಷದ ಮಾ.2ರವರೆಗೆ 27,224 ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಅವಧಿಯಲ್ಲಿ ಕಳೆದ ವರ್ಷ ಒಟ್ಟು 41,224 ಭಾರತೀಯರು ಭೇಟಿ ನೀಡಿದ್ದರು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರವಾಸಿಗರ ಸಂಖ್ಯೆ ಶೇ.33ರಷ್ಟು ತಗ್ಗಿದೆ.
ಇದೇ ವೇಳೆ ಕೊರೊನಾ ಇದ್ದರೂ 2021ರಲ್ಲಿ 2.11 ಲಕ್ಷ ಭಾರತೀಯರು, 2022ರಲ್ಲಿ 2.4 ಲಕ್ಷ ಭಾರತೀಯರು ಮತ್ತು 2023ರಲ್ಲಿ ಒಟ್ಟು 2,09,198 ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ.