ಕಾಂಗ್ರೆಸ್ ಪಕ್ಷದ ನೂತನ ಮುಖ್ಯ ಕಚೇರಿ ‘ಇಂದಿರಾ ಭವನ’ ಉದ್ಘಾಟನೆ

ದೆಹಲಿ:

    ನೂತನವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್​ ಪಕ್ಷದ ಪ್ರಧಾನ ಕಚೇರಿಯನ್ನು ಕಾಂಗ್ರೆಸ್​ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆಯಾಗಿ ಉದ್ಘಾಟಿಸಿದರು.ಪ್ರಧಾನ ಕಚೇರಿಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರನ್ನು ಇಡಲಾಗಿದ್ದು, “ಇಂದಿರಾ ಭವನ’ ಎಂದು ಕರೆಯಲಾಗಿದೆ.

    9ಎ, ಕೋಟ್ಲಾ ರಸ್ತೆಯಲ್ಲಿ ನಿರ್ಮಿಸಲಾಗಿದ್ದು, ಇಲ್ಲಿಯವರೆಗೆ 24, ಅಕ್ಬರ್ ರಸ್ತೆ ಆವರಣದಿಂದ ಕಳೆದ 47 ವರ್ಷಗಳಿಂದ ಕಾರ್ಯಾ ನಿರ್ವಹಿಸುತ್ತಿತ್ತು, ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

   ಆಡಳಿತಾತ್ಮಕ, ಸಾಂಸ್ಥಿಕ ಮತ್ತು ಕಾರ್ಯತಂತ್ರದ ಚಟುವಟಿಕೆಗಳನ್ನು ಬೆಂಬಲಿಸಲು ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಪಕ್ಷದ ವಿಕಸನಗೊಳ್ಳುತ್ತಿರುವ ಅಗತ್ಯಗಳನ್ನು ಪೂರೈಸಲು ‘ಇಂದಿರಾ ಗಾಂಧಿ ಭವನ’ವನ್ನು ವಿನ್ಯಾಸಗೊಳಿಸಲಾಗಿದೆ. 2009ರ ಡಿಸೆಂಬರ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರು ಈ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.