ಕೋಲ್ಕತ್ತಾ:
ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಮುಂದುರೆದಿದ್ದು, ಶುಕ್ರವಾರ ಢಾಕಾ ಜಿಲ್ಲೆಯಲ್ಲಿರುವ ಇಸ್ಕಾನ್ ಕೇಂದ್ರವನ್ನು ಸುಟ್ಟು ಹಾಕಲಾಗಿದೆ ಎಂದು ಇಂಟರ್‌ನ್ಯಾಶನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್(ಇಸ್ಕಾನ್) ಶನಿವಾರ ಆರೋಪಿಸಿದೆ.
ದೇವಾಲಯದ ಒಳಗಿದ್ದ ದೇವರ ವಿಗ್ರಹಗಳು ಮತ್ತು ಇತರ ವಸ್ತುಗಳನ್ನು ಸಂಪೂರ್ಣವಾಗಿ ಸುಟ್ಟುಹಾಕಲಾಗಿದೆ. ಧ್ವಂಸಗೊಂಡ ಧಾರ್ಮಿಕ ಕೇಂದ್ರವು ತುರಾಗ್ ಪೊಲೀಸ್ ಠಾಣೆಯ ವ್ಯಾಪ್ತಿಯ ಢಾಕಾದಲ್ಲಿದೆ. ದೇವಸ್ಥಾನದ ಹಿಂಭಾಗದಲ್ಲಿರುವ ತಗಡಿನ ಮೇಲ್ಛಾವಣಿಯನ್ನು ಎತ್ತಿ ಪೆಟ್ರೋಲ್ ಅಥವಾ ಆಕ್ಟೇನ್ ಬಳಸಿ ಧಾರ್ಮಿಕ ಕೇಂದ್ರಕ್ಕೆ ಬೆಂಕಿ ಹಚ್ಚಲಾಗಿದೆ’ ಎಂದು ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷ ರಾಧಾರಾಮನ್ ದಾಸ್ ಅವರು ಪಿಟಿಐಗೆ ತಿಳಿದ್ದಾರೆ.
ಶ್ರೀ ಲಕ್ಷ್ಮೀ ನಾರಾಯಣ ದೇವರುಗಳು ಮತ್ತು ದೇವಾಲಯದ ಒಳಗಿರುವ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ದಾಸ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಶುಕ್ರವಾರ ಮಧ್ಯರಾತ್ರಿ 2-3 ಗಂಟೆಯ ನಡುವೆ ತುರಗ ಪೊಲೀಸ್ ಠಾಣಾ ವ್ಯಾಪ್ತಿಯ ಧೌರ್ ಗ್ರಾಮದಲ್ಲಿರುವ ಹರೇ ಕೃಷ್ಣ ನಾಮಹಟ್ಟಾ ಸಂಘದ ಅಧೀನದಲ್ಲಿರುವ ಶ್ರೀ ರಾಧಾ ಕೃಷ್ಣ ದೇವಸ್ಥಾನ ಮತ್ತು ಶ್ರೀ ಮಹಾಭಾಗ್ಯ ಲಕ್ಷ್ಮೀ ನಾರಾಯಣ ದೇವಸ್ಥಾನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಅವರು ತಿಳಿಸಿದ್ದಾರೆಯ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಮುಂದುವರಿದಿವೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸುರಕ್ಷತೆ ಬಗ್ಗೆ ಭರವಸೆ ನೀಡಿದ್ದರೂ ಪೊಲೀಸರು ಮತ್ತು ಆಡಳಿತ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ದಾಸ್ ಹೇಳಿದ್ದಾರೆ.ಬಾಂಗ್ಲಾದ ಭೈರಬ್‌ನಲ್ಲಿರುವ ಇಸ್ಕಾನ್ ದೇಗುಲವನ್ನು ಧ್ವಂಸಗೊಳಿಸಿದ ಒಂದು ವಾರದ ನಂತರ ಇದೀಗ ಮತ್ತೊಂದು ಇಸ್ಕಾನ್ ದೇಗುಲವನ್ನು ದುಷ್ಕರ್ಮಿಗಳು ಗುರಿಯಾಗಿಸಿದ್ದು, ದುಷ್ಕರ್ಮಿಗಳ ಗುಂಪು ದೇವಾಲಯದ ಆವರಣಕ್ಕೆ ನುಗ್ಗಿ ಧಾರ್ಮಿಕ ಕಲಾಕೃತಿಗಳು ಮತ್ತು ವಿಗ್ರಹಗಳಿಗೆ ಹಾನಿ ಮಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.