ಕೊರಟಗೆರೆ :-
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅನುದಾನದಲ್ಲಿ ಕೊರಟಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ 30 ಕೋಟಿ ರೂ ಅನುದಾನ ಸಣ್ಣ ನೀರಾವರಿ ಇಲಾಖೆ ಸಂಬಂಧಪಟ್ಟಂತ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಷ್ಠಾನಕ್ಕೆ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು .
ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹತ್ತಾರು ಪ್ರದೇಶಗಳಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಪಟ್ಟಂತೆ 30 ಕೋಟಿ ಅನುದಾನದ ಬ್ಯಾರೇಜ್ ಕಮ್ ಬ್ರಿಡ್ಜ್ ಕಾಮಗಾರಿ ಗರುಡಾಚಲ ನದಿ, ಜಯಮಂಗಲಿ ನದಿ ಹಾಗೂ ಸುವರ್ಣ ಮುಖಿ ನದಿಗಳಿಗೆ ಅಡ್ಡಲಾಗಿ ನಿರ್ಮಾಣಗೊಳಿಸಲು ಸ್ಥಳ ಪರಿಶೀಲನೆಗೆ ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಮೂಡ್ಲಗಿರಿಯಪ್ಪ, ಕನ್ಸಲ್ಟೆಂಟ್ ಅರುಣ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವತ್ ನಾರಾಯಣ್, ತಾ .ಗ್ಯಾರಂಟಿ ಯೋಜನೆ ಅಧ್ಯಕ್ಷ ವೆಂಕಟೇಶ್ ಮುಖಂಡರುಗಳಾದ ತೊಗರಿ ಘಟ್ಟ ನಾರಾಯಣಪ್ಪ, ಬಿಡಿ ಪುರ ಸುದೇಶ್ ಸೇರಿದಂತೆ ಹಲವರು ಉನ್ನತ ಅಧಿಕಾರಿಗಳ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಹಾಜರಿದ್ದರು .
