ನವದೆಹಲಿ:
ರಾಜಧಾನಿ ದೆಹಲಿಯಲ್ಲಿ ರೈತಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿ ರುವಂತೆಯೇ ಇತ್ತ ಕೇಂದ್ರ ಸರ್ಕಾರ ಕೂಡ ಸಂಧಾನ ಪ್ರಯತ್ನ ಮುಂದುವರೆದಿದೆ.
ನಿನ್ನೆ ತಡರಾತ್ರಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಹಾಗೂ ಕೇಂದ್ರ ಸರ್ಕಾರ ನಡೆಸಿದ ನಾಲ್ಕನೇ ಸುತ್ತಿನ ಮಾತುಕತೆಯು ಆರಂಭಿಕವಾಗಿ ಯಶಸ್ಸು ಕಂಡಿದೆ ಎನ್ನಲಾಗಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಚಂಡೀಗಢದ ಸೆಕ್ಟರ್ 26ರಲ್ಲಿ ಇರುವ ಮಹಾತ್ಮ ಗಾಂಧಿ ರಾಜ್ಯ ಸಾರ್ವಜನಿಕ ಆಡಳಿತ ಸಂಸ್ಥೆಯಲ್ಲಿ ರೈತ ನಾಯಕರೊಂದಿಗೆ ಮಾತುಕತೆ ನಡೆಸಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರೂ ಈ ಸಭೆಯಲ್ಲಿ ಇದ್ದರು. ರಾತ್ರಿ 8.15ಕ್ಕೆ ಆರಂಭವಾದ ಸಭೆ ತಡರಾತ್ರಿ 1 ಗಂಟೆವರೆಗೂ ನಡೆಯಿತು.
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಸರ್ಕಾರ ಹೊಸ ಯೋಜನೆ ರೂಪಿಸಿದ್ದು, ಇದರ ಕುರಿತು ಅಧ್ಯಯನ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಹಾಗಾಗಿ, ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಎರಡು ದಿನಗಳವರೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ.
ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಹಾಗೂ ಕೇಂದ್ರ ಸರ್ಕಾರ ನಡೆಸಿದ ನಾಲ್ಕನೇ ಸುತ್ತಿನ ಮಾತುಕತೆಯು ಆರಂಭಿಕವಾಗಿ ಯಶಸ್ಸು ಕಂಡಿದೆ ಎಂದು ಹೇಳಲಾಗಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಸರ್ಕಾರ ಹೊಸ ಯೋಜನೆ ರೂಪಿಸಿದ್ದು, ಇದರ ಕುರಿತು ಅಧ್ಯಯನ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಹಾಗಾಗಿ, ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಎರಡು ದಿನಗಳವರೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ. ಕೇಂದ್ರ ಸರ್ಕಾರವು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕುರಿತು ರೂಪಿಸುತ್ತಿರುವ ಹೊಸ ಯೋಜನೆಯ ಬಗ್ಗೆ ಅಧ್ಯಯನ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ.
“ಕೇಂದ್ರದ ಯೋಜನೆ ಕುರಿತು ಕೃಷಿ ತಜ್ಞರ ಜತೆ ಚರ್ಚಿಸುತ್ತೇವೆ. ಫೆಬ್ರವರಿ 19 ಹಾಗೂ 20ರಂದು ಇದರ ಕುರಿತು ಅಧ್ಯಯನ ನಡೆಸಿ, ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಢೇರ್ ತಿಳಿಸಿದ್ದಾರೆ. ಹಾಗಾಗಿ, ಫೆಬ್ರವರಿ 19 ಹಾಗೂ 20ರಂದು ಪ್ರತಿಭಟನೆ ನಡೆಸುವುದಿಲ್ಲ. ಫೆಬ್ರವರಿ 21ರಂದು ಬೆಳಗ್ಗೆ ಪ್ರತಿಭಟನೆ ಆರಂಭಿಸುವ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.