ಪಿ ಎಸ್‌ ಐ ನೇಮಕಾತಿ ಹಗರಣ : ಆರ್‌ ಡಿ ಪಾಟೀಲ್‌ ಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು 

     ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್‌ ಆಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್ ವಿರುದ್ಧ ರಾಜ್ಯದ ವಿವಿಧ ಕಡೆ ದಾಖಲಾಗಿರುವ 11 ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

    ಇದರಿಂದಾಗಿ ಪಾಟೀಲ್ ಸದ್ಯಕ್ಕೆ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಜೊತೆಗೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ಆದೇಶಿಸಿದೆ.
    ಪಾಟೀಲ್ ವಿರುದ್ಧ ಕಲಬುರಗಿಯ ಚೌಕ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಒಂದು ಪ್ರಕರಣ, ಸ್ಟೇಷನ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರಕರಣ, ಅಶೋಕ್ ನಗರ ಠಾಣೆಯಲ್ಲಿ ದಾಖಲಾಗಿರುವ ಐದು ಪ್ರಕರಣ, ಬೆಂಗಳೂರಿನ ರಾಮಮೂರ್ತಿ ನಗರ, ತುಮಕೂರಿನ ಕ್ಯಾತಸಂದ್ರ ಹಾಗೂ ಧಾರವಾಡದ ಉಪ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.
        ಅಲ್ಲದೇ, ಇದೇ ಅಪರಾಧಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಿಸಿ ಪಾಟೀಲ್ ಅವರನ್ನು ಪೋಲಿಸರು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ಅರ್ಜಿದಾರ ಪರ ವಕೀಲರು ಆತಂಕ ವ್ಯಕ್ತಪಡಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಗಳ ಮುಂದಿನ ಮುಂದಿನ ವಿಚಾರಣೆವರೆಗೆ ಪಾಟೀಲ್ ವಿರುದ್ಧ ಯಾವುದೇ ಬಲದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸಿ ವಿಚಾರಣೆಯನ್ನು 30ಕ್ಕೆ ಮುಂದೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap