ಮಾಸ್ಕೋ:
ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.80 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ವಿಶ್ವದಾದ್ಯಂತ ಈವರೆಗೂ 28,047,828 ಮಂದಿ ಸೋಂಕಿನಿಂದ ಬಳಲುತ್ತಿದ್ದು, 907,000 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದೆ.
28,047,828 ಮಂದಿ ಸೋಂಕಿತರ ಪೈಕಿ 20,342,740ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 7,071, 472 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. ವಿಶ್ವದಲ್ಲಿ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕಾವೊಂದರಲ್ಲೇ 6,588,163 ಸೋಂಕಿತರಿದ್ದು, ಈವರೆಗೆ 196,328 ಮಂದಿ ಸಾವಿಗೀಡಾಗಿದ್ದಾರೆ.
ಎರಡನೇ ಸ್ಥಾನಕ್ಕೆ ತಲುಪಿರುವ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 45,62,415ಕ್ಕೆ ತಲುಪಿದ್ದು, 76,271 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ ಸೋಂಕಿತರ ಸಂಖ್ಯೆ 4,239,763ಕ್ಕೆ ಏರಿಕೆಯಾಗಿದ್ದು, 129,575 ಮಂದಿ ಬಲಿಯಾಗಿದ್ದಾರೆ.