ಕೌಲಾಲಂಪುರ
ಮಲೇಷ್ಯಾದ ಎಂಎಎಸ್ ಕಾರ್ಗೊ ಸಮೀಪದ ಕೆಎಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಭಾನುವಾರ ರಾತ್ರಿ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ನಾಲೆಗೆ ಪರಿಣಾಮ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ.
ಬಸ್ ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನೆಲೆಯಲ್ಲಿ ಬಸ್ ನಾಲೆಗೆ ಉರುಳಿ ಬಿದ್ದಿದೆ ಎಂದು ಹೇಳಲಾಗುತ್ತಿದ್ದು, ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಎಂಎಎಸ್ ಕಾರ್ಗೊ ಕಂಪನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು ಎಂದು ಕೆಎಲ್ಐಎ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜುಲ್ಕಿಫ್ಲಿ ಆಡಮ್ಶಾಹ್ ತಿಳಿಸಿದ್ದಾರೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಜನ ವಿದೇಶಿ ಸಿಬ್ಬಂದಿ ಹಾಗೂ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಸಿಬ್ಬಂದಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಕಜಂಗ್, ಸರ್ದಂಗ್ ಹಾಗೂ ಪುತ್ರಜಯ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
ಆಗ್ನಿಶಾಮಕ ಹಾಗೂ ರಕ್ಷಣಾ ತಂಡದವರು ಸ್ಥಳಕ್ಕೆ ಧಾವಿಸಿ ಇತರ ಪ್ರಯಾಣಿಕರನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದ ಕಾರಣ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ.