ಭಾರತಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಪಾಕಿಸ್ತಾನ ..!!

ಇಸ್ಲಾಮಾಬಾದ್:
     ಕಾಶ್ಮೀರದ ವಿಷಯದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರದಿಂದ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣ ಮತ್ತು ಅನಿಶ್ಚಿತತೆಯನ್ನು ಮೌನವಾಗಿಯೇ ಅವಲೋಕಿಸಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದು,ಈ ಸಂದರ್ಭದಲ್ಲಿ ಭಾರತ ನಮ್ಮ ಮೇಲೆ ಆಕ್ರಮಣಕ್ಕೆ ಕೈಹಾಕಿದರೆ ನಾವುಕೂಡ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
    ಇಂದು ರಾಜಧಾನಿಯಲ್ಲಿ ನಡೆದ ಎನ್ ಎಸ್ ಸಿ ಸಭೆಯ ಬಳಿಕ ಮಾತನಾಡಿದ ಇಮ್ರಾನ್ ಖಾನ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ತಮ್ಮ ಸರ್ಕಾರಕ್ಕೆ ಅವಗಾಹನೆ ಇದೆ ಅಧಿಕಾರಿಗಳು ಕೂಡ ಈಗಿರುವ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಭಾರತ ಯಾವುದೇ ರೀತಿಯ ದುಸ್ಸಾಹಸಕ್ಕೆ ಕೈ ಹಾಕಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
     ಅಂತೆಯೇ ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಕೂಡ ಈ ಹಿಂದೆ ಕಳವಳ ವ್ಯಕ್ತಪಡಿಸಿತ್ತು. ಈ ಕುರಿತಂತೆ ನಾವೂ ಕೂಡ ಆಗಾಗ್ಗೆ ವಿಶ್ವಸಂಸ್ಥೆಗೆ ಮಾಹಿತಿ ನೀಡುತ್ತಾ ಬಂದಿದ್ದೇವೆ. ಯಾವುದೇ ಸರ್ಕಾರ ಕಾಶ್ಮೀರ ಜನತೆಯ ಆಶೋತ್ತರಗಳ ವಿರುದ್ಧ ನಡೆಯುವಂತಿಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap