ಢಾಕಾ:
ಗ್ಯಾಸ್ ಪೈಪ್ ಲೈನ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತಿದ್ದ ಬಾಲಕ ಸೇರಿ ಹನ್ನೊಂದು ಮಂದಿ ಸಾವನ್ನಪ್ಪಿದ್ದು, ಸುಮಾರು ಮೂವತ್ತಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ರಾಜಧಾನಿ ಢಾಕಾದ ನಾರಾಯಣ ಗಂಜ್ನಲ್ಲಿರುವ ಬೈತಸ್ ಸಲಾಟ್ ಜಾಮೆ ಮಸೀದಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಘಟನೆಯಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ 9 ಗಂಟೆಯ ಸುಮಾರಿಗೆ ಮಸೀದಿಯಲ್ಲಿ ಸುಮಾರು ನೂರು ಮಂದಿ ಪ್ರಾರ್ಥನೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ ಇನ್ನೇನು ಪ್ರಾರ್ಥನೆ ಮುಗಿಸಿ ಮನೆಗೆ ತೆರಳಬೇಕು ಎನ್ನುವಷ್ಟರಲ್ಲಿ ಗ್ಯಾಸ್ ಪೈಪ್ ಲೈನ್ ಸ್ಪೋಟಗೊಂಡಿದ್ದು ಮೂವತ್ತಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಶನಿವಾರ ಬೆಳಿಗ್ಗೆ ಓರ್ವ ಬಾಲಕ ಸೇರಿ ಹನ್ನೊಂದು ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಗಾಯಗೊಂಡವರಲ್ಲಿ ಸುಮಾರು ಮೂವತ್ತು ಮಂದಿಗೆ ಶೇಕಡಾ 70ರಷ್ಟು ಸುಟ್ಟ ಗಾಯಗಳಾಗಿದ್ದು ಅವರು ತೀರಾ ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸ್ಫೋಟ ಸಂಭವಿಸಿದ ಸಂದರ್ಭ ಮಸೀದಿಯಲ್ಲಿ ಅಳವಡಿಸಿದ್ದ ಆರು ಹವಾನಿಯಂತ್ರಕ ಯಂತ್ರಗಳು ಸ್ಪೋಟಗೊಂಡಿವೆ ಎನ್ನಲಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದ್ದಾರೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
