ಮನೀಲಾ:
ಫಿಲಿಪೈನ್ಸ್ ನಲ್ಲಿ ಮುಸ್ಲಿಂ ಭಯೋತ್ಪಾದಕರು ರೋಮನ್ ಕ್ಯಾಥೋಲಿಕ್ ಚರ್ಚ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಈ ದಾಳಿಯಲ್ಲಿ ಕನಿಷ್ಠ 21 ಮಂದಿ ಮೃತಪಟ್ಟು 42 ಜನ ಗಾಯಗೊಂಡಿದ್ದಾರೆ.
ರೋಮನ್ ಕ್ಯಾಥೋಲಿಕ್ ಕ್ಯಾಥೆಡ್ರಲ್ ಮೇಲೆ ದಾಳಿ ನಡೆದಿದ್ದು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚುವ ಸಾಧ್ಯತೆ ಇದೆ ಎಂದು ಪೋಲೀಸರು ಹೇಳಿದ್ದಾರೆ.ದಾಳಿಯಲ್ಲಿ ಐವರು ಸೈನಿಕರು ಸೇರಿದಂತೆ ನಾಗರಿಕರು ಸಾವಿಗೀಡಾಗಿದ್ದಾರೆ. 42 ಮಂದಿ ಗಾಯಗೊಂಡಿದ್ದಾರೆ ಎಂದು ಸಶಸ್ತ್ರ ಪಡೆಗಳ ವಕ್ತಾರ ಎಡ್ವರ್ಡ್ ಅರೆವಾಲೋ ಡಿಝಡ್ ತಿಳಿಸಿದ್ದಾರೆ,
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








