ಗುಯಾಂಗ್
ನಾದ ಗುಯಾಂವು ಪ್ರಾಂತ್ಯದ ಎರಡು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ ಓರ್ವ ಸಾವನ್ನಪ್ಪಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ .ಮಂಗಳವಾರ, ಹೆಜಾಂಗ್ ಕೌಂಟಿಯ ಹಳ್ಳಿಯೊಂದರ ನಿರ್ಮಾಣ ಸ್ಥಳದ ಬಳಿ ಭೂಕುಸಿತದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಆಡಳಿತ ಈ ಮಾಹಿತಿ ನೀಡಿದೆ.
ರಕ್ಷಣಾ ಕಾರ್ಯ ಆರಂಭವಾಗಿದ್ದು, ದುರಂತದ ಹಿನ್ನೆಲೆ ಕುರಿತು ತನಿಖೆ ನಡೆಸಲಾಗುವುದು. ಲಿಯುಪುನ್ಶು ನಗರದ ಹಳ್ಳಿಯೊಂದರಲ್ಲಿ ಮಂಗಳವಾರ ಸಂಜೆ ಭೂಕುಸಿತದಲ್ಲಿ 20ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ ಎಂದರು.ದುರಂತದ ನಂತರ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಒಂದು ಗಂಟೆಯಲ್ಲಿಯೇ ಕನಿಷ್ಠ 10 ಜನರನ್ನು ರಕ್ಷಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ