ವಾಷಿಂಗ್ಟನ್:
ಕೊರೋನಾ ವೈರಸ್ ಸಂಬಂಧಿಸಿದ ಎಲ್ಲಾ ರೀತಿಯ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ ಪಕ್ಷಪಾತ ಧೋರಣೆ ಮಾಡುತ್ತಿದೆ ಎಂದು ನಿರಂತರವಾಗಿ ದೂರುತ್ತಾ ಬಂದಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು,ಅಮೇರಿಕ ಡಬ್ಲ್ಯೂಹೆಚ್ಒ ಜೊತೆಗಿನ ಎಲ್ಲಾ ರೀತಿಯ ಸಂಬಂಧವನ್ನು ಅಮೆರಿಕಾ ಕಡಿದುಕೊಂಡಿದೆ ಎಂದು ಘೋಷಣೆ ಮಾಡಿದ್ದಾರೆ.
ನಮ್ಮ ದೇಣಿಗೆ ಹೊರತಾಗಿಯೂ ಡಬ್ಲ್ಯೂಹೆಚ್ಒ ಮೇಲೆ ಚೀನಾ ಸಂಪೂರ್ಣ ನಿಯಂತ್ರಣ ಹೊಂದಿದೆ ಎಂದು ಕಿಡಿಕಾರಿದ್ದಾರೆ. ಡಬ್ಲ್ಯೂಹೆಚ್ಒಗೆ ನೀಡುವ ಹಣವನ್ನು ಜಾಗತಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಇತರೆ ಸಂಸ್ಥೆಗಳಿಗೆ ನೀಡಲಾಗುತ್ತದೆ ಎಂದು ಇದೇ ವೇಳೆ ಟ್ರಂಪ್ ಅವರು ತಿಳಿಸಿದ್ದಾರೆ.
ಬಳಿಕ ಚೀನಾ ವಿರುದ್ಧವೂ ತೀವ್ರವಾಗಿ ಕಿಡಿಕಾರಿರುವ ಅವರು, ಹಾಂಕಾಂಗ್’ಗೆ ಅಮೆರಿಕಾ ಈವರೆಗೆ ನೀಡಿಕೊಂಡು ಬಂದಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಿದೆ. ಚೀನಾ ರೀತಿಯೇ ಅದನ್ನೂ ಕಾಣಲಿದೆ. ಅಮೆರಿಕಾ ವಿವಿ ಹಾಗೂ ಕಾಲೇಜುಗಳಲ್ಲಿ ಕೆಲ ಚೀನಾ ವಿದ್ಯಾರ್ಥಿಗಳ ಪ್ರವೇಶಕ್ಕೆ ತಡೆಯೊಡ್ಡಲಾಗುತ್ತದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Trump_WHO-770x433-1.gif)