ವಾಷಿಂಗ್ಟನ್:
ಏಷ್ಯಾ ರಾಷ್ಟ್ರಗಳಿಂದಲ್ಲದೇ ಜಗತ್ತಿನ ವಿವಿಧೆಡೆಗಳಿಂದ ಉದ್ಯೋಗ ಅರಸಿ ಅಮೇರಿಕಗೆ ಬರುವ ಜನರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ವಿಶ್ವದ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೇರಿಕದಲ್ಲೂ ನಿರುದ್ಯೋಗ ಸಮಸ್ಯೆ ಕಾಣಿಸಿಕೊಂಡಿದೆ. ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ನಿರುದ್ಯೋಗವು ಹಿಂದೆಂದಿಗಿಂತಲೂ ಹೆಚ್ಚಾಗಿದೆ ಕಾರ್ಮಿಕ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.
ಆಗಸ್ಟ್ ಅಂತ್ಯಗೊಳ್ಳುವ ವಾರದಲ್ಲಿ ನಿರುದ್ಯೋಗ ಸವಲತ್ತುಗಳಿಗಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ.ಇನ್ನೂ ಸರ್ಕಾರ ಸಹ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳಿಗೆ ಮುಂದಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.