ವಾಷಿಂಗ್ಟನ್:
ಪುಲ್ವಾಮಾ ದಾಳಿ ಬಳಿಕ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ಪಾಕ್ ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.
ಭಾರತದಲ್ಲಿ ಇನ್ನೊಂದು ಉಗ್ರ ದಾಳಿ ನಡೆದಿದ್ದೇ ಆದಲ್ಲಿ ಪಾಕಿಸ್ತಾನಕ್ಕೆ ಗ್ರಹಚಾರ ನೆಟ್ಟಗಿರಲ್ಲ ಎಂದು ಹೇಳುವ ಮೂಲಕ ಪಾಕ್ ಗೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಭಾರತದಲ್ಲಿ ಉಗ್ರ ದಾಳಿ ನಡೆದರೇ ಪಾಕಿಸ್ತಾನ ಹಿಂದೆಂದೂ ಕಂಡೂಕೇಳರಿಯದ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ. ಉಗ್ರರವಾದ ಶಮನ ಮಾಡುವ ನಿಟ್ಟಿನಲ್ಲಿ ಪಾಕ್ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತೇವೆ. ನಿಮ್ಮಿಂದ ಸಾಧ್ಯವಾಗದಿದ್ದಲ್ಲಿ ಮತ್ತೆ ಉಗ್ರ ಚಟುವಟಿಕೆಗಳು ಕಾಣಿಸಿಕೊಳ್ಳುತ್ತದೆ ಎಂದರು.
ಶ್ವೇತಭವನವು ಪತ್ರಿಕಾ ಪ್ರಕಟಣೆಯಲ್ಲಿ ಪಾಕಿಸ್ತಾನಕ್ಕೆ ಈ ಎಚ್ಚರಿಕೆಯನ್ನು ನೀಡುವ ಮೂಲಕ ಪಾಕಿಸ್ತಾನ ಮತ್ತೆ ತನ್ನ ಬಾಲ ಬಿಚ್ಚಿದಲ್ಲಿ ಭಾರತ ಅತ್ಯಂತ ಪರಿಣಾಮಕಾರಿ ಪ್ರತ್ಯುತ್ತರ ನೀಡೋದು ನಿಶ್ಚಿತ ಎನ್ನುವ ಸಂದೇಶವನ್ನು ಪಾಕಿಸ್ತಾನಕ್ಕೆ ಅಮೆರಿಕ ರವಾನಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








