ವಾಷಿಂಗ್ಟನ್:
ಅಮೆರಿಕದಲ್ಲಿ ಕೊರೊನಾ ಸೋಂಕು ಸಂಬಂಧಿತ ಸಾವು ಒಂದು ಲಕ್ಷದೊಳಗಿರಲಿದೆ ಎಂದು ಅಂದಾಜಿಸಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಶ್ವೇತಭವನದಲ್ಲಿ ಅವರು, ಒಂದು ಲಕ್ಷಕ್ಕಿಂತ ಕಡಿಮೆ ಸಾವಿನ ಸ್ಥಿತಿ ಇರಲಿದೆ ಎಂದು ಆಶಯ ವ್ಯಕ್ತಪಡಿಸಿದರು.ಕೊರೊನಾ ಸೋಂಕಿನ ಸಾವಿನ ಸಂಖ್ಯೆ ಸುಮಾರು 60 ರಿಂದ 70 ಸಾವಿರದಷ್ಟು ಇರಲಿದೆ ಎಂದು ಇದಕ್ಕೂ ಮುನ್ನ ಟ್ರಂಪ್ ಆಡಳಿತ ಅಂದಾಜಿಸಿತ್ತು.
ಅಮೆರಿಕದಲ್ಲಿ ಈವರೆಗೆ ಸುಮಾರು 65 ಸಾವಿರ ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು 11,34,084 ಜನರು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ ಮಾಡಿದೆ.
