ವಾಷಿಂಗ್ಟನ್
ದೇಶದಲ್ಲಿ ಹಲವು ದಶಕದಿಂದ ಸಾಮರಸ್ಯದಿಂದ ಇರುವ ಭಾರತೀಯರನ್ನು ಜಾತಿ ಆಧಾರದ ಮೇಲೆ ಒಡೆಯುವ ಪ್ರಕ್ರಿಯೆ ಆಗಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿರುವ ಗೃಹ ಸಚಿವ ಅಮಿತ್ ಶಾ ಅವರ ಮೇಲೆ ನಿರ್ಬಂಧ ವಿಧಿಸುವಂತೆ ಅಮೆರಿಕದ ಆಯೋಗವೊಂದು ಆಗ್ರಹಿಸಿದೆ.
ಇನ್ನು ‘ಪೌರತ್ವ ತಿದ್ದುಪಡಿ ಮಸೂದೆಯು ತಪ್ಪು ದಿಕ್ಕಿನಲ್ಲಿನ ಅಪಾಯಕಾರಿ ತಿರುವು’ ಪಡೆದುಕೊಳ್ಳುತ್ತಿದೆ ಎಂದು ತಿಳಿಸಿರುವ ಆಯೋಗ ಸರ್ಕಾರ ಈ ಮಸೂದೆಯಿಂದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಲು ಮುಂದಾಗಿದೆ ಎಂದು ತಿಳಿಸಿದ್ದಾರೆ. 2014ರ ಡಿಸೆಂಬರ್ 31ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಸ್ತಾನದಿಂದ ಧಾರ್ಮಿಕ ಕಾರಣಗಳಿಂದ ಭಾರತಕ್ಕೆ ನಿರಾಶ್ರಿತರಾಗಿ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಕ್ರೈಸ್ತ ಮತ್ತು ಪಾರ್ಸಿ ಸಮುದಾಯದ ಜನರಿಗೆ ಭಾರತದ ಪೌರತ್ವ ನೀಡುವ ಮಸೂದೆ ಇದಾಗಿದೆ. ಇದರಲ್ಲಿ ಮುಸ್ಲಿಮರನ್ನು ಸೇರ್ಪಡೆ ಮಾಡದೆ ಇರುವುದು ವಿವಾದಕ್ಕೆ ಕಾರಣವಾಗಿದೆ
ಈ ಕುರಿತು ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಅಮೆರಿಕನ್ ಆಯೋಗ (ಯುಎಸ್‌ಸಿಐಆರ್ಎಫ್), ಲೋಕಸಭೆಯಲ್ಲಿ ಅಂಗೀಕಾರವಾದ ಮಸೂದೆಯಿಂದ ತೀವ್ರ ಕಳವಳ ಉಂಟಾಗಿದೆ ಎಂದು ಹೇಳಿದೆ. ಈ ಮಸೂದೆಯನ್ನು ಭಾರತದಲ್ಲಿನ ಲಕ್ಷಾಂತರ ಮುಸ್ಲಿಮರ ಪೌರತ್ವವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ ಎಂದು ಆರೋಪಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ