ಲಿಮಾ
ಪೆರು ರಾಜಧಾನಿ ಲಿಮಾ ನಗರದಲ್ಲಿ ಬಸ್ ಗೆ ಬೆಂಕಿ ತಗುಲಿ ಅದರಲ್ಲಿದ್ದ ಸುಮಾರು 20 ಮಂದಿ ಪ್ರಯಾಣಿಕರು ಮೃತಪಟ್ಟು ಅನೇಕರಿಗೆ ಗಾಯಗಳಾಗಿವೆ.
ಲಿಮಾದಿಂದ ಚಿಕ್ಲಾಯೊಗೆ ಹೋಗುತ್ತಿದ್ದ ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇದ್ದರೆನ್ನಲಾಗಿದ್ದು, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಬಸ್ ಆವರಿಸಿದೆ. ಬಸ್ ನ ಕಿಟಕಿಗಳು ಮುಚ್ಚಲ್ಪಟ್ಟಿದ್ದರಿಂದ ಹೊಗೆ ಆವರಿಸಿ ಪ್ರಯಾಣಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ಮುಂದುವರಿಸಲಾಗಿದೆ.