ರೋಮ್:
ಪ್ರವಾಸಿಗರ ಸ್ವರ್ಗ ಇಟಲಿಯಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 2000ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ಗಂಟೆಗಳಲ್ಲಿ 619 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಇಟಲಿಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 20 ಸಾವಿರದತ್ತ ದಾಪುಗಾಲಿರಿಸಿದೆ.
ಇಟಲಿಯಲ್ಲಿ ಶನಿವಾರ ಒಂದೇ ದಿನ ಅಲ್ಲಿ 619 ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಇಟಲಿಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 19,468ಕ್ಕೆ ಏರಿಕೆಯಾಗಿದೆ. ಅಲ್ಲದೇ, ಶುಕ್ರವಾರ 3,951 ಸೋಂಕಿತರು ಪತ್ತೆಯಾಗಿದ್ದು, ಶನಿವಾರ 4,694 ಸೋಂಕು ಪ್ರಕರಣಗಳು ವರದಿಯಾಗಿರುವುದು ಅಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ ಏಪ್ರಿಲ್ 6 ರಿಂದ ನಂತರ ಇದೇ ಮೊದಲ ಬಾರಿಗೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳಾವಾಗಿದೆ. ಅಲ್ಲದೆ, ಏಪ್ರಿಲ್ 4 ನಂತರ ಇದೇ ಮೊದಲ ಬಾರಿಗೆ ಸೋಂಕು ಪ್ರಕರಣಗಳು ಏರಿಕೆಯಾಗಿವೆ.
