ನವದೆಹಲಿ:
ಕಾಂಗ್ರೆಸ್ ಮುಖಂಡ ಮತ್ತು ಟ್ರಬಲ್ ಶೂಟರ್ ಎಂದೇ ಖ್ಯಾತರಾದ ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 25ರವರೆಗೆ ವಿಸ್ತರಿಸಿ ವಿಶೇಷ ಕೋರ್ಟ್ ಇಂದು ಆದೇಶ ನೀಡಿದೆ. ಡಿಕೆ ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದ್ದರು.
ತಿಹಾರ್ ಜೈಲಿನ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಇ.ಡಿ. ಪರ ವಕೀಲರು ಮನವಿ ಮಾಡಿಕೊಂಡಿದ್ದು, ನ್ಯಾಯಾಧೀಶರು ಅ.25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದರು ಎನ್ನಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ