ಪಾಕಿಸ್ತಾನಕ್ಕೆ ದೊಡ್ಡ ಶಾಕ್ ನೀಡಿದ FATF..!

ವಾಷಿಂಗ್ಟನ್:

     ಕಾಶ್ಮೀರ ವಿಶೇಷ ಸ್ಥಾನ ಮಾನ ವಿಚಾರವಾಗಿ ಭಾರತದ ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಟಕ್ಕೆ ಮುಂದಾಗಿರುವ ಪಾಕಿಸ್ತಾನಕ್ಕೆ ಎಫ್ಎಟಿಎಫ್ ದೊಡ್ಡ ಶಾಕ್ ನೀಡಿದೆ.

     ಕ್ಯಾನ್ ಬೆರ್ರಾದಲ್ಲಿ ನಡೆದ  ಸಭೆಯಲ್ಲಿ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಈ ನಿರ್ಣಯದಿಂದಾಗಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ, ಉಗ್ರ ಪೋಷಣೆಗೆ ಆರ್ಥಿಕ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು FATF ತಿಳಿಸಿದೆ. 

    ಪಾಕಿಸ್ತಾನ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಂಡಿಸಿದ ಎಲ್ಲ ವಾದಗಳನ್ನು ಆಲಿಸಿದ ಸಭೆ ಪಾಕಿಸ್ತಾನವು FATF ನಿಗದಿ ಮಾಡಿರುವ 40 ಮಾನದಂಡಗಳ ಪೈಕಿ 32 ಮಾನದಂಡಗಳಲ್ಲಿ ವಿಫಲವಾಗಿದೆ ಎಂದು  ಅಧಿಕಾರಿಯೊಬ್ಬರು ಹೇಳಿದ್ದಾರೆ. 

     ಹೀಗಾಗಿ ಪರೋಕ್ಷವಾಗಿ ಉಗ್ರವಾದಕ್ಕೆ ಪ್ರಚೊದನೆ ನೀಡಿದ ಆರೋಪದ ಮೇಲೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap