ಕಾಶ್ಮೀರ ವಿವಾದ ಇತ್ಯರ್ಥವಾಗದ ಹೊರತು ಶಾಂತಿ ಮಾತುಕತೆ ಇಲ್ಲಾ : ಖುರೇಷಿ

ಪಾಕಿಸ್ತಾನ

    ಕಾಶ್ಮೀರ ವಿವಾದವನ್ನು ಬಗೆಹರಿಸದ ಹೊರತು ಭಾರತದೊಂದಿಗೆ ಯಾವುದೇ ಶಾಂತಿಮಾತುಕತೆಯಾಗಲಿ  ಅಥವಾ ಹೊಂದಾಣಿಕೆಗೆ ಸಿದ್ದವಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ತಿಳಿಸಿದ್ದಾರೆ.

   ಅವರು ವಾಷಿಂಗ್ಟನ್ ನಲ್ಲಿ ನಿನ್ನೆ ಕಾರ್ಯತಂತ್ರ ಮತ್ತು ಅಂತಾರಾಷ್ಟ್ರೀಯ ಅಧ್ಯಯನಗಳ ಚಿಂತಕರ ಸಮಾವೇಶ ವನ್ನುದ್ದೇಶಿಸಿ ಮಾತನಾಡಿ, ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯೆ ಪ್ರವೇಶಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸಿದ್ದಾರೆ.

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ತೆಗೆದುಹಾಕಿ ಅವುಗಳನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ನಂತರ ಭಾರತ ಮತ್ತು ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು ಇದಕ್ಕೆ ಪಾಕಿಸ್ತಾನ ತೀಕ್ಷ್ಣವಾಗಿ ಪ್ರತಿಕ್ರಿಯಿ ಸುತ್ತಲೇ ಬಂದಿದೆ.ತನಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧವಾಗಿ ಬೇರೆ ದೇಶಗಳು ಬೆಂಬಲ ನೀಡಬೇಕೆಂದು ಪಾಕಿಸ್ತಾನ ಕೇಳುತ್ತಲೇ ಬಂದಿದೆ.

    ನೆರೆಯ ದೇಶಗಳಲ್ಲಿ ಶಾಂತಿ ನೆಲೆಸಬೇಕೆಂದು ನಮ್ಮ ಸರ್ಕಾರ ಬಯಸುತ್ತದೆ. ಆರ್ಥಿಕ ಸುಧಾರಣೆಗೆ ಮತ್ತು ಇತರ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ನಮ್ಮ ದೇಶದ ಅಜೆಂಡಾವನ್ನು ಸಾಧಿಸುವತ್ತ ಗಮನ ಹರಿಸಲು ನಮಗೆ ಶಾಂತಿ ಬೇಕು. ಹಾಗೆಂದು ಭಾರತದೊಂದಿಗೆ ಶಾಂತಿಮಾತುಕತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದು ನಮ್ಮ ಘನತೆ, ಗೌರವಕ್ಕೆ ತಕ್ಕುದಾದುದಲ್ಲ, ಕಾಶ್ಮೀರ ಸಮಸ್ಯೆಯನ್ನು ಭಾರತ ಬಗೆಹರಿಸದಿದ್ದರೆ ಶಾಂತಿ ಮಾತುಕತೆಗೆ ನಾವು ಖಂಡಿತಾ ಸಿದ್ದವಿಲ್ಲ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap