ನಾನು ಪ್ರತಿದಿನ ಹೈಡ್ರಾಕ್ಸಿಕ್ಲೋರೋಕ್ವಿನೋನ್ ಮಾತ್ರೆ ತೆಗೆದುಕೊಳ್ಳುತ್ತೇನೆ : ಟ್ರಂಪ್

ವಾಷಿಂಗ್ಟನ್ :

      ಕೊರೋನಾದಿಂದ ರಕ್ಷಣೆಗೆಂದು ನಾನು ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ತಾನು ತೆಗೆದುಕೊಳ್ಳುತ್ತಿದ್ದೇನೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಚ್ಚರಿಯ ಪ್ರಕಟಣೆ ನೀಡಿದ್ದಾರೆ. ಸುಮಾರು ಒಂದೂವರೆ ವಾರದಿಂದ ತಡೆಗಟ್ಟುವ ನಿಟ್ಟಿನಲ್ಲಿ ಮಲೇರಿಯಾ ರೋಗಿಗಳಿಗೆ ನೀಡುವ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರು.

     “ನಾನು ಪ್ರತಿದಿನ ಮಾತ್ರೆ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದರು. ಏಕೆ ಎಂದು ಕೇಳಿದಾಗ, ಅವರು ಹೇಳಿದರು “ಏಕೆಂದರೆ ಅದು ಒಳ್ಳೆಯದು ಎಂದು ನಾನು ಭಾವಿಸುತ್ತೇನೆ, ಆ ಔಷಧಿಯ ಬಗ್ಗೆ ನಾನು ಸಾಕಷ್ಟು ಒಳ್ಳೆಯ ಮಾತುಗಳನ್ನ ಕೇಳಿದ್ದೇನೆ” ಎಂದರು.ಕೊರೋನವೈರಸ್ಗೆ ಸಂಭಾವ್ಯ ಚಿಕಿತ್ಸೆಯಾಗಿ ಟ್ರಂಪ್ ಔಷಧಿಯನ್ನು ತೆಗೆದುಕೊಳ್ಳುವುದು ಒಳ್ಳೆಯದುಅಲ್ಲ ಎಂದು ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ