ಇಸ್ಲಾಮಾಬಾದ್
ಪಾಕಿಸ್ಥಾನದಲ್ಲಿ ಸಧ್ಯಇರುವಆರ್ಥಿಕ ಹಿಂಜರಿತಕ್ಕೆ ಪ್ರತೀಕವಾಗಿ ವಿರೋಧ ಪಕ್ಷಗಳು ನಡೆಸುತ್ತಿರುವ ಆಜಾದಿ ಮಾರ್ಚ್ ಗೆ ಹೆದರಿಕೊಂಡು ರಾಜೀನಾಮೆ ನೀಡಿ ಓಡಿ ಹೋಗುಲು ನಾನು ಹೇಡಿ ಅಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ವಿರೋಧ ಪಕ್ಷಗಳು ಸರ್ಕಾರ ವಿರುದ್ಧ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು ಅದು ಅಕ್ಟೋಬರ್ 31ಕ್ಕೆ ಇಸ್ಲಾಮಾಬಾದ್‌ನಲ್ಲಿ ಕೊನೆಗೊಳ್ಳಲಿದೆ. ಹಿರಿಯ ಪತ್ರಕರ್ತರು ಮತ್ತು ವಿಶ್ಲೇಷಕರೊಂದಿಗಿನ ನಡೆದ ಸಭೆಯಲ್ಲಿ ಮಾತನಾಡಿದ ಇಮ್ರಾನ್ ಖಾನ್, ಜೆಯುಐ-ಎಫ್ ಮುಖ್ಯಸ್ಥ ಫಜ್ಲೂರ್ ರೆಹಮಾನ್ ಅವರ ಪ್ರತಿಭಟನೆಯ ಹಿಂದೆ ದೊಡ್ಡ ಪಿತೂರಿ ಇದೆ. ಇದು ಒಂದು ನಿರ್ದಿಷ್ಟ ಕಾರ್ಯಸೂಚಿಯಿಂದ ಈ ಪ್ರತಿಭಟನೆ ನಡೆಸಲ್ಪಡುತ್ತಿದೆ. ಜಿಯುಐ-ಎಫ್ ನ ಯಾವುದೇ ಒತ್ತಡಕ್ಕೆ ತಾವು ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ