ದುಬೈ:
ಐಸಿಸಿ ಬಿಡುಗಡೆಗೊಳಿಸಿದ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೆಸ್ಟ್ ಮತ್ತು ಟಿ 20 ಐ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೇರಿದ್ದು ಏಕದಿನ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಮೊದಲ ಸ್ಥಾನ ಉಳಿಸಿಕೊಂಡಿದೆ. ಟೆಸ್ಟ್ ನಲ್ಲಿ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದ್ದು ಆಸ್ಟ್ರೇಲಿಯಾ (116) ಭಾರತದಿಂದ ಅಗ್ರ ಪಟ್ಟ ಕಸಿದುಕೊಂಡಿದೆ. ಇದರೊಡನೆ ಭಾರತ 2016ರ ನಂತರ ಮೊಟ್ಟ ಮೊದಲ ಬಾರಿಗೆ ಅಗ್ರಸ್ಥಾನ ವಂಚಿತವಾಗಿದೆ.
ಇನ್ನು ಶ್ರೇಯಾಂಕ ಪಟ್ಟಿಯಲ್ಲಿ ನ್ಯೂಜಿಲೆಂಡ್ (115) ಎರಡನೇ ಸ್ಥಾನದಲ್ಲಿದೆ. ಭಾರತ ಈಗ 114 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ಜನವರಿ 2016ರಲ್ಲಿ ಭಾರತ ಅಗ್ರಸ್ಥಾನ ಹೊಂದಿದ್ದಾಗಲೂ ಕೇವಲ ಒಂದೇ ಅಂಕಗಳ ಅಂತರದಲ್ಲಿ ಆಸ್ಟ್ರೇಲಿಯಾ ಎರಡನೇ ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದ್ದವು.
ಐಸಿಸಿ ಪುರುಷರ ಏಕದಿನ ತಂಡದ ಶ್ರೇಯಾಂಕದಲ್ಲಿ, ವಿಶ್ವ ಚಾಂಪಿಯನ್ ಇಂಗ್ಲೆಂಡ್ (127) ಭಾರತದ ವಿರುದ್ಧ ತಮ್ಮ ಮುನ್ನಡೆಯನ್ನು ಕಾಯ್ದುಕೊಂಡಿದೆ. ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದೆ,ಪಾಕಿಸ್ತಾನ 260 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
