ಐ ಎಂ ಎಫ್ : ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತವೂ ಒಂದು…!!!

ವಾಷಿಂಗ್ಟನ್ :
        ಆರ್ಥಿಕ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆಗಳಲ್ಲಿ ಭಾರತವೂ ಸಹ ಒಂದು ಎಂದು ಇಂಟರ್ ನ್ಯಾಷನಲ್ ಮಾನಿಟರಿ ಫಂಡ್ ತಿಳಿಸಿದೆ.
        ಕಳೆದ ಐದು ವರ್ಷಗಳಲ್ಲಿ ಅನೇಕ ಮಹತ್ವದ ಸುಧಾರಣೆಯಾಗಿದೆ. ಆದರೆ, ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಾಗಿದೆ ಎಂದು ತಿಳಿಸಿದೆ.
        ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕ ಪ್ರಗತಿ ಕುರಿತಂತೆ ಪ್ರತಿಕ್ರಿಯಿಸಿದ ಐಎಂಎಫ್ ಮಾಧ್ಯಮ ಸಂವಹನ ನಿರ್ದೇಶಕ ಗೆರಿ ರೈಸ್ ಹೇಳುವಂತೆ ಕಳೆದ ಐದು ವರ್ಷಗಳಲ್ಲಿ ಭಾರತ ಶೇ, 7 ರ ಸರಾಸರಿಯಲ್ಲಿ ಬೆಳವಣಿಗೆಯಾಗುತ್ತಿದೆ, ಕಳೆದ ಐದು ವರ್ಷಗಳಲ್ಲಿ ವಿಶ್ವದಲ್ಲಿನ ವೇಗವಾಗಿ ಬೆಳೆವಣಿಗೆಯಾಗುತ್ತಿರುವ ದೊಡ್ಡ ಆರ್ಥಿಕ ವ್ಯವಸ್ಥೆಯಾಗಿದೆ ಎಂದರು.
 
          ಮಹತ್ವದ ಸುಧಾರಣೆಗಳನ್ನು ಜಾರಿಗೊಳಿಸಲಾಗಿದೆ. ಈ ದೊಡ್ಡ ಬೆಳವಣಿಗೆಯನ್ನು ಸುಸ್ಥಿರವಾಗಿ ಮುಂದುವರೆಸಿಕೊಂಡು ಇನ್ನೂ ಹೆಚ್ಚಿನ ಸುಧಾರಣೆಯಾಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.ಮುಂಬರುವ ವರ್ಲ್ಡ್ ಇಕೊನಾಮಿಕ್ ಔಟ್ ಲುಕ್ ನಲ್ಲಿ ಭಾರತದ ಆರ್ಥಿಕ ವ್ಯವಸ್ಥೆ ಬಗ್ಗೆ ಮಾಹಿತಿಯನ್ನೊಳಗೊಂಡ ಸರ್ವೆ ವರದಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿದೆ ಈ ವರದಿಯು ಐಎಂಎಫ್ ನ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರ  ಅಧೀನದಲ್ಲಿ  ಈ ವರದಿ ತಯಾರಿಸಲಾಗಿದೆ.  
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link