ಜಿನೀವಾ:
ಚೀನಾದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 213ಕ್ಕೆ ಏರಿಕೆಯಾಗಿ ವಿದೇಶಗಳಿಗೂ ವೈರಸ್ ವ್ಯಾಪಿಸಿರುವ ಹಿನ್ನಲೆಯಲ್ಲಿ ಕೊರೊನಾ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಘಟನೆ ಜಾಗತಿಕ ತುರ್ತು ಘೋಷಿಸಿ ಆದೇಶ ಹೊರಡಿಸಿದೆ .
ಸ್ವಿಡ್ಜರ್ಲ್ಯಾಂಡ್ ನ ಜಿನಿವಾದಲ್ಲಿರುವ ವಿಶ್ವ ಆರೋಗ್ಯ ಸಂಘಟನೆಯ ಸಭೆಯ ಆರಂಭದಲ್ಲಿ ಕೊರೊನಾ ವೈರಸ್ ನಿಂದ ಜಾಗತಿಕವಾಗಿ ಅಪಾಯವಿಲ್ಲಾ ಎಂದು ಭಾವಿಸಲಾಗಿತ್ತು . ಆದರೆ ಕಳೆದ ನಾಲ್ಕೈದು ದಿನಗಳ ಅಪಾಯದ ಮೌಲ್ಯಮಾಪನವನ್ನು ಪರಿಷ್ಕರಿಸಿ ಜಾಗತಿಕ ಮಟ್ಟದಲ್ಲಿ ವೈರಸ್ ನಿಂದ ಜಾಗೃತೆ ವಹಿಸುವಂತೆ ಜಗತ್ತಿನ ಎಲ್ಲಾ ದೇಶಗಳಿಗೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ .
ಕೊರೊನಾ ವೈರಸ್ 15ಕ್ಕೂ ಹೆಚ್ಚು ದೇಶಗಳಿಗೆ ಹರಡಿದ್ದು ಚೀನಾ ದೇಶದೊಂದಿಗೆ ಪ್ರಯಾಣ ಮತ್ತು ವ್ಯಾಪಾರಕ್ಕೆ ಸದ್ಯಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಈ ರೀತಿ ಮಾಡುವುದು ಅನಗತ್ಯ, ಇದರಿಂದ ವೈರಸ್ ತಡೆಯಲು ಸಾಧ್ಯವಿಲ್ಲ. ಎಲ್ಲರೂ ಒಟ್ಟು ಸೇರಿ ಕೆಲಸ ಮಾಡಿದರಷ್ಟೆ ವೈರಸ್ ಹರಡುವುದನ್ನು ಕಡಿಮೆ ಮಾಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅವರು ಚೀನಾಕ್ಕೆ ಭೇಟಿ ನೀಡಿ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ.
ಈಗಾಗಲೇ ಹಲವು ದೇಶಗಳು ಚೀನಾಕ್ಕೆ ಹೋಗಬೇಡಿ ಎಂದು ತನ್ನ ನಾಗರಿಕರಿಗೆ ಹಲವು ದೇಶಗಳ ಸರ್ಕಾರಗಳು ಒತ್ತಾಯಿಸುತ್ತಿದ್ದು ಚೀನಾದ ಕೇಂದ್ರ ನಗರ ವುಹಾನ್ ನಿಂದ ಪ್ರಯಾಣಿಕರು ತಮ್ಮ ದೇಶಕ್ಕೆ ಪ್ರಯಾಣಿಸುವುದನ್ನು ಸಹ ತಡೆದಿವೆ. ಇಲ್ಲಿಯೇ ಕೊರೊನಾ ವೈರಸ್ ಸೋಂಕು ಹೆಚ್ಚಾಗಿ ಕಾಣಿಸಿಕೊಂಡು ಜನರು ಮೃತಪಟ್ಟಿರುವುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ