ಮಾಲಿ ದಾಳಿಯ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ..!

ಮಾಲಿ:

   ಮಾಲಿಯ ರಾಜಧಾನಿಯಲ್ಲಿ ಉಗ್ರರ ಅಟ್ಟಹಾಸಕ್ಕೆ 54 ಜನ ಬಲಿಯಾಗಿರುವ ಘಟನೆ ವರದಿಯಾಗಿದೆ.ಅಲ್ಲಿನ ಸೇನೆ ಮೇಲೆ ನಡೆದಿರುವ ಭೀಕರ ದಾಳಿಗಳಲ್ಲಿ ಇದು ಒಂದಾಗಿದೆ ಮಾಲಿ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದೆ ಎಂದು ವರದಿಯಾಗಿದೆ. 

   ಅಮಾಕ್ ನ್ಯೂಸ್ ಎಂಬ ಏಜೆನ್ಸಿ  ಮೂಲಕ ಇಸ್ಲಾಮಿಕ್ ಸ್ಟೇಟ್ ಈ ಕೃತ್ಯಕ್ಕೆ ತಾನೇ ಜವಾಬ್ದಾರಿ ಎಂದು ತಿಳಿಸಿದೆ. ಅಮೆರಿಕ ವಿಶೇಷ ಪಡೆಗಳು ಇಸ್ಲಾಮಿಕ್ ಸ್ಟೇಟ್ ನ ನಾಯಕ ಅಬು ಬಕರ್ ಅಲ್-ಬಗ್ದಾದಿಯನ್ನು ಹತ್ಯೆ ಮಾಡಿದ ಬಳಿಕ ಹಲವು ರಾಷ್ಟ್ರಗಳಲ್ಲಿ ನಡೆದಿರುವ ವಿಧ್ವಂಸಕ ಕೃತ್ಯಗಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ ಎನ್ನಲಾಗಿದೆ.
 ಮಾಲಿಯಲ್ಲಿ ಸೇನೆ ಮೇಲೆ ಇಸ್ಲಾಮಿಕ್ ಸ್ಟೇಟ್ ಉಗ್ರರು ದಾಳಿ ನಡೆಸಿದ್ದು, ಅಲ್ಲಿನ ಸೇನೆ ಉಗ್ರರ ಮೇಲೆ ಪ್ರತಿ ದಾಳಿ ನಡೆಸಿದೆ.ನಡೆದ ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ ಮತ್ತು ಉಗ್ರರಿಗಾಗಿ ತೀವ್ರ ಶೋಧ ಕಾರ್ಯ ನಡೆಸಿದೆ ಎಂದು ತಿಳಿದುಬಂದಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap