ವಾಷಿಂಗ್ಟನ್:
ಸದ್ಯ ಡೆಡ್ಲಿ ವೈರಸ್ ಗಳ ಜನಕ ಎಂದೇ ಗುರುತಿಸಿಕೊಳ್ಳುತ್ತಿರುವ ಚೀನಾ ಕೆಲ ತಿಂಗಳ ಹಿಂದೆ ಮಾಡಿದ ಒಂದು ಎಡವಟ್ಟು ಇಂದು ಜಗತ್ತಿನ 213 ರಾಷ್ಟ್ರಗಳಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟಕ್ಕೆ ಕಾರಣವಾಗಿದೆ.
ಚೀನಾ ಸಂಶೋಧಕರು ಚೀನಾದಲ್ಲಿ ಸಾಂಕ್ರಾಮಿಕವಾಗಿ ಹರಡಬಲ್ಲ ಸಾಮರ್ಥ್ಯವಿರುವ ಸ್ವೈನ್ ಫ್ಲೂ (ಹಂದಿಜ್ವರ)ದ ವೈರಸ್ ಅನ್ನು ಪತ್ತೆ ಮಾಡಿದ್ದಾರೆ. ಚೀನಾದಲ್ಲಿರುವ ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದ್ದು, ಈ ವೈರಸ್ ಮನುಷ್ಯರಿಗೂ ಅಂಟಿಕೊಳ್ಳುವ ಸಾಮರ್ಥ್ಯವಿದ್ದು, ಮನುಷ್ಯರಿಂದ ಮನುಷ್ಯರಿಗೆ ಹರಡಿ ಸಾಂಕ್ರಾಮಿಕವಾಗುವ ಭೀತಿ ಇದೆ ಎಂದು ಚೀನಿ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಚೀನಾದ ಕೆಲ ಪ್ರಾಂತ್ಯಗಳಲ್ಲಿರುವ ಹಂದಿಗಳು ಇನ್ಫ್ಲುಯೆಂಜಾದಿಂದ ಹೆಚ್ಚು ಹೆಚ್ಚು ಸೋಂಕಿಗೆ ಒಳಗಾಗುತ್ತಿವೆ, ಈ ಸೋಂಕು ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ. ಇದು ಸುಲಭದಲ್ಲಿ ಒಬ್ಬರಿಂದ ಒಬ್ಬರಿಗೆ ಹರಡಬಹುದಾಗಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಜಿ-4 ಎಂಬ ಹೆಸರಿನ ವೈರಸ್ ಇದಾಗಿದ್ದು,ಚೀನಾದ ಹಂದಿಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ವೈರಸ್ ಯುರೋಪಿಯನ್ ಮತ್ತು ಏಷ್ಯನ್ ಪಕ್ಷಿಗಳಲ್ಲಿಯೂ ತಗಲುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/G4-swine-flu-virus.gif)