ನೈಟ್ ಕ್ಲಬ್ ನಲ್ಲಿ ಶೂಟೌಟ್ : ಹಲವರಿಗೆ ಗಾಯ

0
14
ಮೆಲ್ಬೋರ್ನ್:
 
            ನಗರದಲ್ಲಿ ದುಷ್ಕರ್ಮಿಯೋಬ್ಬ ನಡೆಸಿರುವ ಶೂಟಿಂಗ್ ನಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ  ಗಂಭೀರವಾಗಿದೆ  ಎಂದು ತಿಳಿದುಬಂದಿದೆ.
             ಆಸ್ಟ್ರೇಲಿಯಾದ ಎರಡನೇ ದೊಡ್ಡ ನಗರವಾದ ಮೆಲ್ಬೋರ್ನ್ ನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಲ್ಲಿನ ನೈಟ್ ಕ್ಲಬ್ ವೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕ್ಲಬ್ ನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

        ವಾರದ ಕೊನೆಯಾಗಿದ್ದರಿಂದ ಕ್ಲಬ್ ನಲ್ಲಿ ಸಾಕಷ್ಟು ಮಂದಿ ಇದ್ದರು. ಹೀಗಾಗಿ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಅಂತೆಯೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಮತ್ತು  ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
       ಇನ್ನು ಈ ಘಟನೆ ಭಯೋತ್ಪಾದಕ ಕೃತ್ಯವಲ್ಲ ಎಂದು ಹೇಳಿರುವ ಸ್ಥಳೀಯ ಜಿಲ್ಲಾಡಳಿತ ಇದು ದುಷ್ಕರ್ಮಿಗಳ ಕೃತ್ಯ ಎಂದು ಸ್ಪಷ್ಟನೆ ನೀಡಿದ್ದಾರೆ. ಇನ್ನು 1996ರಲ್ಲಿ ಇದೇ ಮೆಲ್ಬೋರ್ನ್ ನಲ್ಲಿ ನಡೆದಿದ್ದ ಶೂಟಿಂಗ್ ನಲ್ಲಿ 35 ಮಂದಿ ಅಸು ನೀಗಿದ್ದರು ಎಂದು ತಿಳಿಸಿದೆ .
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here