ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್ ನಲ್ಲಿ ಚಿನ್ನ ಗೆದ್ದ ಪಿ ವಿ ಸಿಂಧು..!

ಬಾಸೆಲ್:

      ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿಯಾದ ಪಿ.ವಿ.ಸಿಂಧು ಅವರು ಇಂದು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್‍ ನಲ್ಲಿ ಚಿನ್ನ ಗೆಲ್ಲುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ.

    ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಕೀರ್ತಿ ಗಳಿಸಿದ್ದಾರೆ. ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶಿಸಿದ್ದರು ಆದರೆ ಪ್ರಶಸ್ತಿಯಿಂದ ವಂಚಿತರಾಗಿ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.

    ಪಿ.ವಿ.ಸಿಂಧು ಅಂತಿಮ ಸುತ್ತಿನ ಹಣಾಹಣಿಯಲ್ಲಿ ಜಪಾನ್‍ನ ಒಕುಹಾರ ಅವರನ್ನು 21-7, 21-7 ಗೇಮ್‍ಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್ ನಲ್ಲಿ ಸಿಂಧು ಅವರು 2013 ಮತ್ತು 2014ರಲ್ಲಿ ಕಂಚಿನ ಪದಕ ಗೆದ್ದಿದ್ದರು. 2017 ಹಾಗೂ 2018ರಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಆದರೆ ಈ ಬಾರಿಯ ಫೈಲನ್ ಪ್ರವೇಶಿಸಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್ ಪ್ರಶಸ್ತಿ ಚಿನ್ನ ಗೆದ್ದು ಅಪ್ರತಿಮ ಸಾಧನೆ ಮಾಡಿದ್ದಾರೆ.

   ಭಾರತದ ದಂತಕತೆ ಪ್ರಕಾಶ್ ಪಡುಕೋಣೆ ಅವರು 1983ರ ವಿಶ್ವ ಚಾಂಪಿಯನ್‍ಷಿಪ್‍ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ ಎನಿಸಿದ್ದರು. ಸದ್ಯ 26 ವರ್ಷಗಳ ನಂತರ ಚಾಂಪಿಯನ್ ಷಿಪ್ ಮುಡಿಗೇರಿಸಿದ ಭಾರತಕ್ಕೆ ಎರಡನೆಯವರಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link