ಪಾಕಿಸ್ತಾನ :
ನೆರೆಯ ಚೀನಾದ ಪರಮಾಪ್ತ ರಾಷ್ಟ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ ಪಾಕಿಸ್ತಾನಕ್ಕೆ ಇನ್ನು ಮುಂದೆ ಈಗಾಗಲೇ ಘೋಷಣೆ ಮಾಡಿರುವ ಸಾಲವನ್ನೂ ಕೊಡುವುದಿಲ್ಲ, ಅದಕ್ಕೆ ಈಗಾಗಲೇ ವಾಗ್ದಾನ ಮಾಡಿರುವ ತೈಲವನ್ನೂ ಸಹ ಕೊಡುವುದಿಲ್ಲ ಎಂದು ಸೌದಿ ಅರೇಬಿಯಾ ಹೇಳಿದೆ.ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಮತ್ತು ಮತ್ತು ಸೌದಿ ಅರೇಬಿಯಾದ ದೋಸ್ತಿ ಮುಕ್ತಾಯವಾಗಿದ್ದು, ಪಾಕಿಸ್ತಾನ ತಲೆತಲೆ ಚಚ್ಚಿಕೊಳ್ಳುವಂತಾಗಿದೆ.
ಈ ಬಗ್ಗೆ ಮಿಡ್ಲ್ ಈಸ್ಟ್ ಮಾನಿಟರ್ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ನಡುವಿನ ಸ್ನೇಹ ಸಂಬಂಧ ಅಂತ್ಯವಾಗಿದೆ ಎಂದು ಹೇಳಿದೆ.
2018ರ ಅಂತ್ಯದಲ್ಲಿ ಸೌದಿ ಅರೇಬಿಯಾವು 6.2 ಬಿಲಿಯನ್ ಡಾಲರ್ ಪ್ಯಾಕೇಜನ್ನು ಪಾಕಿಸ್ತಾನಕ್ಕೆ ನೀಡುವುದಾಗಿ ಘೋಷಿಸಿತ್ತು. ಅದರಲ್ಲಿ 3 ಬಿಲಿಯನ್ ಹಣದ ರೂಪದ ಸಾಲ ಹಾಗೂ 3.2 ಬಿಲಿಯನ್ ಮೊತ್ತದ ತೈಲವನ್ನು ಸಾಲವನ್ನು ನೀಡುವ ಒಪ್ಪಂದವಾಗಿತ್ತು. 2019ರ ಫೆಬ್ರವರಿಯಲ್ಲಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
