ಕೊಲಂಬೊ:
ಶ್ರೀಲಂಕಾದಲ್ಲಿ ರಾಜಕೀಯ ಜಟಾಪಟಿ ಮುಂದುವರೆದಿರುವ ಸಂದರ್ಭದಲ್ಲಿ ಸೋಮವಾರ ಸಂಭವಿಸಿದ ಹಿಂಸಾಚಾರದಲ್ಲಿ ನೀಯೋಜಿತ ಪ್ರಧಾನಿ ರಾಜಪಕ್ಸ ಬೆಂಬಲಿಗನ ಹತ್ಯೆಯಾದ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಖಾತೆ ಸಚಿವ ಅರ್ಜುನ ರಣತುಂಗಾ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಲೊನ್ ಪೆಟ್ರೋಲಿಯಂ ಕಾರ್ಪೋರೇಷನ್ ಆವರಣದ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡು ರಾನಿಲ್ ವಿಕ್ರಮ್ ಸಿಂಘೆ ಆಪ್ತ 54 ವರ್ಷದ ರಣತುಂಗಾ ಅವರ ಅಂಗರಕ್ಷಕರು ಮಹಿಂದಾ ರಾಜಪಕ್ಸ ಅವರ ಬೆಂಬಲಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ .ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
