ದಾವೊಸ್:
ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ವರ್ಷಾನು ವರ್ಷದಿಂದ ಬಗೆಹರಿಯದ ವ್ಯಾಜ್ಯವಾಗಿ ಇರುವ ಕಾಶ್ಮೀರ ವಿವಾದ ಅಗತ್ಯಬಿದ್ದರೆ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ನಾವು ಸಿದ್ದ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದಾವೊಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಮಿತ್ರ ರಾಆಷ್ಟ್ರಗಳಾದ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿವಾದ ಬಗೆಹರಿಸಲು ಸಾಧ್ಯವಾಗುವುದಾದರೆ ಖಂಡಿತವಾಗಿಯೂ ಮಧ್ಯಸ್ಥಿಕೆ ವಹಿಸಲು ಸಿದ್ಧವಿದ್ದೇವೆ ಎಂದರು.
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರ ವಿವಾದದಿಂದ ಪಾಕಿಸ್ತಾನ ಮತ್ತು ಭಾರತ ಮಧ್ಯೆ ಏನು ನಡೆಯುತ್ತಿವೆ ಎಂಬುದರ ಕುರಿತು ನಾವು ಮಾತನಾಡುತ್ತಿದ್ದೇವೆ. ನಮ್ಮ ಕಡೆಯಿಂದ ಸಹಾಯಹಸ್ತ ಚಾಚಲು ಸಾಧ್ಯವಾಗುವುದಾದರೆ ನಾವು ಖಂಡಿತಾ ಸಿದ್ದರಿದ್ದೇವೆ ಎಂದು ಹೇಳಿದ್ದಾರೆ. ಅವರ ಹೇಳಿಕೆಯ ವಿಡಿಯೊವನ್ನು ವೈಟ್ ಹೌಸ್ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿದೆ. ಟ್ರಂಪ್ ಅವರು ಹೀಗೆ ಹೇಳಿದಾಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ತಲೆಯಾಡಿಸಿ ಅವರ ಮಾತನ್ನು ಒಪ್ಪಿಕೊಂಡ ಸೂಚನೆ ಕಂಡುಬಂತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ