ವಾಷಿಂಗ್ಟನ್:

ಯಾರೂ ಊಹಿಸದ ಬೆಳವಣಿಗೆಯೊಂದರಲ್ಲಿ ವಿಶ್ವ ಬ್ಯಾಂಕ್ ಅಧ್ಯಕ್ಷ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ .
ಎರಡನೇ ಅವಧಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 58 ವರ್ಷದ ಕಿಮ್ ಅವರ ಅವಧಿ 2022ಕ್ಕೆ ಅಂತ್ಯಗೊಳ್ಳಲಿದೆ. ಆದರೆ ಅವಧಿಗೂ ಮುನ್ನವೇ ಫೆಬ್ರವರಿ 1ರಿಂದ ಜಾರಿಗೆ ಬರುವಂತೆ ಇಂದು ರಾಜೀನಾಮೆ ನೀಡಿದ್ದಾರೆ.ವಿಶ್ವ ಬ್ಯಾಂಕ್ ನಂತಹ ಗಮನಾರ್ಹ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಮಹತ್ವದ ಗೌರವವಾಗಿದೆ. ನನ್ನ ಅವಧಿಯಲ್ಲಿ ತೀವ್ರವಾದ ಬಡತನವನ್ನು ಅಂತ್ಯಗೊಳಿಸಲು ಯತ್ನಿಸಿದ್ದೇನೆ ಎಂದು ಕಿಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
