ಬೀಜಿಂಗ್
ಚೀನಾದ ವುಹಾನ್ ನಗರಕ್ಕೆ 3 ತಿಂಗಳ ನಂತರ ಮೊದಲ ಬಾರಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ ನೀಡಿದ್ದು ಅಲ್ಲಿನ ಪರಿಸ್ತಿತಿ ಮತ್ತು ವಸ್ತುಸ್ಥಿತಿಗಳನ್ನು ಖುದ್ದಾಗಿ ಪರಿಶೀಲಿಸಿದ್ದಾರೆ.
ಇನ್ನು ಉಹಾನ್ ಜನತೆಯೊಂದಿಗೆ ಮಾತನಾಡಿದ ಅಧ್ಯಕ್ಷರು ಎಂತಹ ವಿಷಮ ಪರಿಸ್ಥಿತಿಯಲ್ಲೂ ಚೀನಾ ಎಂದಿಗೂ ಎದೆಗುಂದುವುದಿಲ್ಲಾ ಎಂದು ಉಹಾನ್ ನ ಜನತೆ ಮತ್ತೊಮ್ಮೆ ಜಗತ್ತಿಗೆ ಸಾರಿದ್ದಾರೆ ಮತ್ತು ಕೊರೊನಾ ವೈರಸ್ ನಿಯಂತ್ರಣಕ್ಕೆ ಶ್ರಮಿಸಿದ ಮತ್ತು ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಸೇನಾಧಿಕಾರಿಗಳು ಮತ್ತು ಯೋಧರು, ಸಂಘ-ಸಂಸ್ಥೆಗಳ ಕಾರ್ಯಕರ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಸ್ವಯಂತ ಸೇವಕರನ್ನು ಭೇಟಿ ಮಾಡಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಎಲ್ಲರಿಗೂ ಅಭಿನಂದನೆ ಸಲ್ಲಿಸಲಿಸಿದ್ದಾರೆ.
ಇದುವರೆಗೂ ಚೀನಾದಲ್ಲಿ ಮಾರಕ ಸೋಂಕಿಗೆ 3,136 ಮಂದಿ ಮೃತಪಟ್ಟಿದ್ದಾರೆ ಎಂದು ಚೀನಾದ ಆರೋಗ್ಯ ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಮಂಗಳವಾರ ಹುಬೈ ರಾಜಧಾನಿ ವುಹಾನ್ ನಗರಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ ನೀಡಲಿದ್ದು, ಮೊದಲಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ನಗರದಲ್ಲಿ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಕ್ಸಿಂಹುವಾ ಸುದ್ದಿಸಂಸ್ಥೆಯು ವರದಿ ಮಾಡಿದೆ. .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
