ಅಣು ಒಪ್ಪಂದದಿಂದ ಹೊರ ಬಂದ ಅಮೇರಿಕಾ..!!

ತೆಹ್ರಾನ್

       ಅಣು ಒಪ್ಪಂದದಿಂದ ಹಿಂದೆ ಸರಿದು, ತಮ್ಮ ದೇಶದ ಮೇಲೆ ನಿಷೇಧ ಹೇರಿರುವ ಅಮೆರಿಕಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು ಇರಾನ್ ಸಿದ್ಧವಾಗಿದ್ದು, ಸದ್ಯದಲ್ಲಿಯೇ ಆ ಕುರಿತು ಪ್ರಕಟಣೆ ಹೊರಡಿಸಲಿದೆ.

        2015ರ ಅಣು ಒಪ್ಪಂದದಿಂದ ಏಕಪಕ್ಷೀಯವಾಗಿ ಹೊರಬಂದಿರುವ ಅಮೆರಿಕ, ಇರಾನ್ ದೇಶದ ತೈಲ ಹಾಗೂ ಬ್ಯಾಂಕಿಂಗ್ ವ್ಯವಹಾರದ ಮೇಲೆ ನಿಷೇಧ ಹೇರಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಇರಾನ್ ಸಿದ್ಧತೆ ನಡೆಸಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಆದರೆ, ಒಪ್ಪಂದ ಕೈಬಿಡಬೇಕೆಂಬ ಅಮೆರಿಕದ ಒತ್ತಡಕ್ಕೆ ಮಣಿಯದ ಇರಾನ್, ಅಣು ಒಪ್ಪಂದದ ನಿಯಮಗಳಿಗೆ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಒಪ್ಪಂದದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಈಗಾಗಲೇ ಚೀನಾ, ರಷ್ಯಾ, ಬ್ರಿಟನ್, ಯೂರೋಪಿಯನ್ ಒಕ್ಕೂಟ ಸೇರಿ ಹಲವು ರಾಷ್ಟ್ರಗಳು ಈ ಒಪ್ಪಂದಕ್ಕೆ ಬೆಂಬಲ ಸೂಚಿಸಿವೆ.

       ಜೊತೆಗೆ, ಅಣು ಒಪ್ಪಂದದ ಸಂದರ್ಭದಲ್ಲಿ ಇರಾನ್ ಒಪ್ಪಿಕೊಂಡಿದ್ದ ಕೆಲ ಇತಿಮಿತಿಗಳನ್ನು ತೆಗೆದುಹಾಕಲು ನಿರ್ಧರಿಸಿರುವುದಾಗಿ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಹೇಳಿದ್ದಾರೆ. 2018ರ ಮೇ ನಲ್ಲಿ ಒಪ್ಪಂದದಿಂದ ಹಿಂದೆ ಸರಿದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮೇಲೆ ವಿಧಿಸಿದ್ದ ಮಾರಾಟ ನಿಷೇಧವನ್ನು ಪುನರ್ ಜಾರಿಗೆ ತಂದಿದ್ದರು. ಈಗ ಇರಾನ್ ಮೇಲೆ ಒತ್ತಡ ಹೇರಿ, ಹೊಸ ಅಣು ಒಪ್ಪಂದಕ್ಕೆ ಒಪ್ಪಿಕೊಳ್ಳುವಂತಹ ಅನಿವಾರ್ಯತೆ ಸೃಷ್ಟಿಸಲು ಅಮೆರಿಕ ಪ್ರಯತ್ನ ನಡೆಸಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link