ಬ್ರಿಟನ್:
ಭಯೋತ್ಪಾದನೆಯ ತವರು ಎಂದು ಕರೆಸಿಕೊಳ್ಳುವ ಪಾಕಿಸ್ತಾನ ಅದನ್ನೇ ನಿರ್ನಾಮಗೊಳಿಸಿದೆ ಎಂದು ಪಾಕ್ ಸೇನೆ ಹೇಳಿದೆ,ಜಗತ್ತು ನಾವು ಮಾಡಿರುವ ಕೆಲಸಕ್ಕೆ ಅಭಿನಂದಿಸಬೇಕಾಗುತ್ತದೆ ಎಂದು ಪಾಕಿಸ್ತಾನ ಸೇನೆಯ ವಕ್ತಾರರು ಹೇಳಿದ್ದಾರೆ.
ಲಂಡನ್ ನಲ್ಲಿ ಮಾತನಾಡಿದ ಪಾಕಿಸ್ತಾನ ಸೇನೆಯ ವಕ್ತಾರ, ಪಾಕಿಸ್ತಾನ ಭಯೋತ್ಪಾದನೆಯನ್ನು ಕೊನೆಗಾಣಿಸಲು ಸಾಕಷ್ಟು ಶ್ರಮಿಸುತ್ತಿದೆ. ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿದ್ದು, ಪಾಕಿಸ್ತಾನದ ಶ್ರಮಕ್ಕೆ ಜಗತ್ತು ಮೆಚ್ಚುಗೆ ವ್ಯಕ್ತಪಡಿಸಬೇಕೆಂದು ಐಎಸ್ ಪಿಆರ್ ನ ಮೇಜರ್ ಜನರಲ್ ಆಸೀಫ್ ಘಫೂರ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ