ಇಸ್ಲಾಮಾಬಾದ್:
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಶಂಕಿತ ಉಗ್ರ ಹಫೀಜ್ ಸಯೀದ್ ಸ್ಥಾಪಿಸಿದ್ದ ಜಮಾತ್ ಉದ್ ದವಾ ಮತ್ತು ಫಲಾಹ್ ಐ ಇನ್ಸಾನಿಯತ್ ಫೌಂಡೇಷನ್ ಸಂಘಟನೆಗಳ ಮೇಲೆ ಹೇರಿದ್ದ ನಿಷೇಧ ತೆರವುಗೊಳಿಸಲಾಗಿದೆ ಎಂದು ಶುಕ್ರವಾರ ಪಾಕಿಸ್ತಾನದ ಮಾಧ್ಯಮವೊಂದು ವರದಿ ಮಾಡಿದೆ ಈ ಆದೇಶದಿಂದಾಗಿ ಹಫೀಸ್ ಸೈಯದ್ ನಿರಾಳ .
ಪಾಕಿಸ್ತಾನದ ಮಾಜಿ ಅಧ್ಯಕ್ಷ ಮಮ್ನೂನ್ ಹುಸೇನ್ ಫೆಬ್ರವರಿಯಲ್ಲಿ ಭಯೋತ್ಪಾದನಾ ವಿರೋಧಿ ಕಾಯ್ದೆ, 1997ಕ್ಕೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದ್ದರು. ಆದರೆ ಇದರ ವಿರುದ್ಧ ಹಫೀಜ್ ಸಯೀದ್ ಇಸ್ಲಾಮಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಗ್ರೀವಾಜ್ಞೆಯ ಅವಧಿ ಮುಕ್ತಾಯವಾಗಿರುವುದರಿಂದ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಸರ್ಕಾರ ಸುಗ್ರೀವಾಜ್ಞೆಯನ್ನು ಮತ್ತೊಮ್ಮೆ ಜಾರಿ ಮಾಡಿದರೆ, ಅರ್ಜಿದಾರರು ಮತ್ತೆ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು ಎಂದು ಪಾಕ್ ಮಾಧ್ಯಮಗಳು ವರದಿಮಾಡಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







