ಲಂಡನ್:

     ಭಾರತದಲ್ಲಿ ಆರ್ಥಿಕ ವಂಚನೆ ಪ್ರಕರಣದಲ್ಲಿ ಬೇಕಾಗಿರುವ,ಪಿ ಎನ್ ಬಿ ಹಗರಣದ ಪ್ರಮುಖ ಆರೋಪಿ ಹಾಗು ವಜ್ರದ ವ್ಯಾಪಾರಿ ನೀರವ್ ಮೋದಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಮಾರ್ಚ್ 24ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

    ಪ್ರಸ್ತುತ ಲಂಡನ್ ಜೈಲಿನಲ್ಲಿರುವ 48 ವರ್ಷದ ನೀರವ್ ಮೋದಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಡೇವಿಡ್ ರೊಬಿನ್ಸನ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮಾರ್ಚ್ 24ರ ವರೆಗೆ ವಿಸ್ತರಿಸಿದರು.

     ಇದೇ ವೇಳೆ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ವರ್ಷ ಮೇ 11ರಿಂದ 15ರ ವರೆಗೆ ವಿಚಾರಣೆ ನಡೆಯಲಿದೆ ಎಂದು ಲಂಡನ್ ಕೋರ್ಟ್ ತಿಳಿಸಿದೆ.ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ