IPL 2022: ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಗೆದ್ದ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್, ಆರೆಂಜ್ & ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

IPL 2022:

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಪಂದ್ಯ ಏಪ್ರಿಲ್ 5ರ ಮಂಗಳವಾರದಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್‍ಗಳ ಗೆಲುವನ್ನು ಸಾಧಿಸಿದೆ.

ಹೌದು, ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಜೋಸ್ ಬಟ್ಲರ್ ಮತ್ತು ಶಿಮ್ರಾನ್ ಹೆಟ್ಮಾಯೆರ್ ಜವಾಬ್ದಾರಿಯುತ ಹಾಗೂ ಸ್ಪೋಟಕ ಆಟದಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 170 ರನ್‌ಗಳ ಗುರಿಯನ್ನು ನೀಡಿತು.

ಅಮೀರ್ ಖಾನ್ ‘PK’ ಹಿಂದಿಕ್ಕಿ ಗಳಿಕೆಯಲ್ಲಿ ದಾಖಲೆ ಬರೆದ ‘RRR’: 10 ದಿನಗಳಲ್ಲಿ 900 ಕೋಟಿ ರೂ. ಕಲೆಕ್ಷನ್

ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭದಲ್ಲಿ ಫಾಫ್ ಡು ಪ್ಲೆಸಿಸ್ ಮತ್ತು ಅನುಜ್ ರಾವತ್ ಜವಾಬ್ದಾರಿಯುತ ಆಟದ ನೆರವಿನಿಂದ ಉತ್ತಮ ಆರಂಭ ಪಡೆದುಕೊಂಡರೂ ಸಹ ಮಧ್ಯಮ ಕ್ರಮಾಂಕದ ವಿಫಲತೆಯಿಂದ ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಜತೆಯಾದ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ 83 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಅಂತಿಮವಾಗಿ ಇನ್ನೂ 5 ಎಸೆತಗಳು ಬಾಕಿ ಇರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿ 4 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಟೂರ್ನಿಯಲ್ಲಿ ತನ್ನ ಎರಡನೇ ಜಯವನ್ನು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವಿನ ಓಟಕ್ಕೂ ಸಹ ಬ್ರೇಕ್ ಹಾಕಿತು.

ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು `ದಂಗಲ್’ : ಮಾವಿನ ಹಣ್ಣು ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂಬ ಅಭಿಯಾನ ಶುರು

ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತ ನಂತರ ಅಂಕಪಟ್ಟಿಯಲ್ಲಿ ಆದ ಬದಲಾವಣೆಗಳೇನು, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಪಟ್ಟಿ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ..

ತುಸು ಏರಿಕೆ ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಮುಕ್ತಾಯವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇನ್ನು ಈ ಪಂದ್ಯದಲ್ಲಿ ಸೋತರೂ ಸಹ ಉತ್ತಮ ನೆಟ್ ರನ್ ರೇಟ್ ಹೊಂದಿರುವ ಕಾರಣ ರಾಜಸ್ಥಾನ್ ರಾಯಲ್ಸ್ ಅಗ್ರಸ್ಥಾನದಲ್ಲಿಯೇ ಉಳಿದುಕೊಂಡಿದೆ. ಇನ್ನುಳಿದಂತೆ ಕೋಲ್ಕತ್ತಾ ನೈಟ್ ರೈಡರ್ಸ್ ದ್ವಿತೀಯ, ಗುಜರಾತ್ ಟೈಟಾನ್ಸ್ ಮೂರನೇ ಸ್ಥಾನ, ಪಂಜಾಬ್ ಕಿಂಗ್ಸ್ ನಾಲ್ಕನೇ ಸ್ಥಾನ ಮತ್ತು ಲಕ್ನೋ ಸೂಪರ್ ಜಯಂಟ್ಸ್ ಐದನೇ ಸ್ಥಾನದಲ್ಲಿದೆ.

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಏ.1ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ದರ ಹೆಚ್ಚಳ

ಆರೆಂಜ್ ಕ್ಯಾಪ್ ಯಾರ ಬಳಿ?

ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಜೋಸ್ ಬಟ್ಲರ್ ಮತ್ತು ಇಶಾನ್ ಕಿಶನ್ ನಡುವೆ ನೇರಾನೇರ ಪೈಪೋಟಿ ಏರ್ಪಟ್ಟಿತ್ತು. ಆದರೆ ಈ ಪಂದ್ಯದಲ್ಲಿ ಅಜೇಯ 70 ರನ್ ಬಾರಿಸಿ ಅಬ್ಬರಿಸಿದ ಜೋಸ್ ಬಟ್ಲರ್ 3 ಪಂದ್ಯಗಳ ಪೈಕಿ 205 ರನ್ ಕಲೆಹಾಕುವ ಮೂಲಕ ಸದ್ಯ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅತ್ತ 2 ಪಂದ್ಯಗಳನ್ನಾಡಿರುವ ಇಶಾನ್ ಕಿಶನ್ 135 ರನ್ ಗಳಿಸಿದ್ದು ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಫಾಫ್ ಡು ಪ್ಲೆಸಿಸ್ ಮೂರನೇ ಸ್ಥಾನ, ದೀಪಕ್ ಹೂಡಾ ನಾಲ್ಕನೇ ಸ್ಥಾನ ಮತ್ತು ಶಿವಂ ದುಬೆ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ 2 ವಿಕೆಟ್ ಪಡೆದ ರಾಜಸ್ಥಾನ್ ರಾಯಲ್ಸ್ ಬೌಲರ್ ಯಜುವೇಂದ್ರ ಚಾಹಲ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. 3 ಪಂದ್ಯಗಳನ್ನಾಡಿ 7 ವಿಕೆಟ್ ಪಡೆದಿರುವ ಚಹಲ್ ದ್ವಿತೀಯ ಸ್ಥಾನದಲ್ಲಿದ್ದರೆ, 3 ಪಂದ್ಯಗಳನ್ನಾಡಿ 7 ವಿಕೆಟ್ ಪಡೆದಿರುವ ಮತ್ತೋರ್ವ ಬೌಲರ್ ಆವೇಶ್ ಖಾನ್ ತೃತೀಯ ಸ್ಥಾನದಲ್ಲಿದ್ದಾರೆ. 3 ಪಂದ್ಯಗಳನ್ನಾಡಿ 8 ವಿಕೆಟ್ ಪಡೆದಿರುವ ಉಮೇಶ್ ಯಾದವ್ ಅಗ್ರಸ್ಥಾನದಲ್ಲಿಯೇ ಉಳಿದುಕೊಂಡಿದ್ದಾರೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap