ದಕ್ಷಿಣ ಆಫ್ರಿಕಾ ವಿರುದ್ಧ ಐರ್ಲೆಂಡ್‌ ಗೆ ಐತಿಹಾಸಿಕ ಜಯ ….!

ನವದೆಹಲಿ :

     ಯುಎಇನ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಐರ್ಲೆಂಡ್ ಪಡೆಯು ಭರ್ಜರಿ ಗೆಲುವು ದಾಖಲಿಸಿದೆ. ವಿಶೇಷ ಎಂದರೆ ಇದು ಏಕದಿನ ಕ್ರಿಕೆಟ್‌ನಲ್ಲಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಜಯ. ಇದಕ್ಕೂ ಮುನ್ನ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಐರ್ಲೆಂಡ್ ತಂಡವು ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿತ್ತು. ಇದೀಗ ಏಕದಿನ ಪಂದ್ಯದಲ್ಲೂ ಗೆಲುವು ದಾಖಲಿಸುವಲ್ಲಿ ಐರಿಷ್ ಆಟಗಾರರು ಯಶಸ್ವಿಯಾಗಿದ್ದಾರೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ದಾಂಡಿಗ ಹ್ಯಾರಿ ಟೆಕ್ಟರ್ 48 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್ ಒಳಗೊಂಡಂತೆ 60 ರನ್ ಸಿಡಿಸಿದರು. ಈ ಅರ್ಧಶತಕಗಳ ನೆರವಿನಿಂದ ಐರ್ಲೆಂಡ್ ತಂಡವು 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 284 ರನ್ ಕಲೆಹಾಕಿತು. ಸೌತ್ ಆಫ್ರಿಕಾ ಪರ ಲಿಝಾಡ್ ವಿಲಿಯಮ್ಸ್ 10 ಓವರ್‌ಗಳಲ್ಲಿ 56 ರನ್ ನೀಡಿ 4 ವಿಕೆಟ್ ಪಡೆದರೆ, ಒಟ್ನಿಲ್ ಬಾರ್ಟ್ ಮ್ಯಾನ್ 8 ಓವರ್‌ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದರು. 

   50 ಓವರ್‌ಗಳಲ್ಲಿ 290 ರನ್ ಗಳ ಗುರಿ ಪಡೆದ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಕೇವಲ 10 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಹಾದಿ ಹಿಡಿದಿದ್ದರು.ಈ ಆರಂಭಿಕ ಆಘಾತದಿಂದ ಪಾರಾಗುವ ಮುನ್ನ ಮತ್ತೆರಡು ವಿಕೆಟ್ ಕಳೆದುಕೊಂಡಿತು. ಪರಿಣಾಮ 79 ರನ್ ಗಳಿಗೆ ಸೌತ್ ಆಫ್ರಿಕಾದ ಐವರು ಬ್ಯಾಟ್ಸ್‌ಮನ್ ಔಟಾದರು.

   ಈ ಹಂತದಲ್ಲಿ ಕಣಕ್ಕಿಳಿದ ಜೇಸನ್ ಸ್ಮಿತ್ 93 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 9 ಫೋರ್ ಗಳೊಂದಿಗೆ 91 ರನ್ ಬಾರಿಸಿದರು. ಈ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

   ಸ್ಮಿತ್ (91) ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಐರ್ಲೆಂಡ್ ಬೌಲರ್ ಗಳು ಸೌತ್ ಆಫ್ರಿಕಾ ತಂಡವನ್ನು 46.1 ಓವರ್‌ಗಳಲ್ಲಿ 215 ರನ್ ಗಳಿಗೆ ಆಲೌಟ್ ಮಾಡಿದರು. ಐರ್ಲೆಂಡ್ ಪರ ಗ್ರಹಾಂ ಹ್ಯೂಮ್ ಹಾಗೂ ಕ್ರೇಗ್ ಯಂಗ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

  ಈ ಮೂಲಕ ಐರ್ಲೆಂಡ್ ತಂಡವು 69 ರನ್ ಗಳ ಐತಿಹಾಸಿಕ ಗೆಲುವು ದಾಖಲಿಸಿದೆ. ಅಲ್ಲದೆ ಟಿ20 ಪಂದ್ಯದ ಗೆಲುವಿನ ಬೆನ್ನಲ್ಲೇ ಏಕದಿನ ಪಂದ್ಯದಲ್ಲೂ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ಐರ್ಲೆಂಡ್ ಪಡೆಯುವ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap