ಅದಾನಿ ವಂಚನೆ : ಪ್ರಶ್ನಿಸಲು ಮೋದಿಗೆ ಸ್ನೇಹ ಅಡ್ಡಿಯೆ?

 

ಚೋಕ್ಸಿ, ನೀರವ್, ಲಲಿತ್, ಮಲ್ಯ ಪರಾರಿ ನಂತರ ಸರದಿ ಅದಾನಿಯದೆ?

ಬೆಂಗಳೂರು :

    ಅದಾನಿ ಹಗರಣ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ಪ್ರಶ್ನೆಗಳ ಅಭಿಯಾನ ಆರಂಭಿಸಿದ್ದು, ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗೂಂಡೂರಾವ್ ಪ್ರಶ್ನಿಸಿದ್ದಾರೆ.

     ಸರಣಿ ಟ್ವೀಟ್ ಮಾಡಿರುವ ಅವರು, ಭಾಗ್ ಮಿಲ್ಕಾ ಭಾಗ್ ಎಂಬಂತೆ ಮೋದಿ ಆಡಳಿತದಲ್ಲಿ ಮೆಹುಲ್ ಚೋಕ್ಸಿ, ನೀರವ್ ಮೋದಿ, ಲಲಿತ್ ಮೋದಿ, ಮಲ್ಯ ಸೇರಿದಂತೆ ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಓಡಿ ಹೋಗಿದ್ದಾರೆ. ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೆ. ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದ್ದ ಎಲ್.ಐ.ಸಿಯ 23 ಸಾವಿರ ಕೋಟಿ ರೂ., ಎಸ್.ಬಿ.ಐ ಕೊಟ್ಟ ಸಾವಿರಾರು ಕೋಟಿ ರೂ. ಸಾಲಕ್ಕೆ ಪಂಗನಾಮ ಗ್ಯಾರಂಟಿಯೇ ಎಂದು ಖಾರವಾಗಿ ಕುಟುಕಿದ್ದಾರೆ.

     ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಅದಾನಿ ವಂಚನೆಯ ಬಗ್ಗೆ ಮಾತಾಡಲು ಮೋದಿಯವರಿಗೆ ಸ್ನೇಹ ಅಡ್ಡಿಯಾಗುತ್ತಿದೆಯೇ? ಸ್ನೇಹಕ್ಕಾಗಿ ದೇಶದ ಲಕ್ಷಾಂತರ ಜನರ ಹೂಡಿಕೆ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆಯೇ ಮೋದಿ? ಪ್ರಧಾನಿ ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ?

     ಆರ್ಥಿಕ ಅಪರಾಧಗಳ ಬಗ್ಗೆ ತಮ್ಮದು ಝೀರೋ ಟಾಲರೆನ್ಸ್ ನಿಲುವು ಎಂದು ಮೋದಿಯವರು ಹೇಳುತ್ತಾರೆ. ಆದರೆ ಅದಾನಿ ಎಸಗಿದ ಆರ್ಥಿಕ ಅಪರಾಧದ ಬಗ್ಗೆ ಮೋದಿಯವರ ವ್ಯಾಖ್ಯಾನವೇನು?  ಕೇವಲ ರಾಜಕೀಯ ವಿರೋಧಿಗಳ ವಿರುದ್ಧ ತನಿಖೆ ಮಾಡುವ ಸಂಸ್ಥೆಗಳೆ? ಮೋದಿಯವರ ಅತ್ಯಾಪ್ತರಿಗೆ ಈ ತನಿಖಾ ಸಂಸ್ಥೆಗಳಿAದ ವಿನಾಯಿತಿ ಇದೆಯೇ ಎಂದಿದ್ದಾರೆ.

    ಸಾರ್ವಜನಿಕರ ಜೀವನ ಭದ್ರತೆಗಾಗಿ ಕಾಂಗ್ರೆಸ್ 1956ರಲ್ಲಿ ಐIಅ ಸ್ಥಾಪಿಸಿತ್ತು. 2021ರವರೆಗೆ  ಜನರ ಹಣ ಸುಭದ್ರವಾಗಿತ್ತು. ಆದರೆ 2021ರಲ್ಲಿ ಈ ಸರ್ಕಾರ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿತ್ತು. ಐIಅ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದ್ದು ಯಾರ ಅನುಕೂಲಕ್ಕಾಗಿ ಮೋದಿಯವರೆ ಎಂದು ದಿನೇಶ್ ಗುಂಡೂರಾವ್ ಕೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link