‘ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯಾ?’ : ಹೈಕೋರ್ಟ್

ಬೆಂಗಳೂರು:

   ಮುಸ್ಲಿಂ ಧರ್ಮದ ಜನರು ಹೆಚ್ಚಾಗಿ ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ಹೈಕೋರ್ಟ್​ ನ್ಯಾಯಮೂರ್ತಿಯೊಬ್ಬರು ವಿವಾದವನ್ನು ಹುಟ್ಟುಹಾಕಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

   ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವಿರೋಧಗಳು ವ್ಯಕ್ತವಾಗುತ್ತಿವೆ. ನ್ಯಾಯಾಧೀಶರು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ​ ವೈರಲ್​ ಆಗುತ್ತಿದ್ದು, ಪರ-ವಿರೋಧದ ಮಾತುಗಳು ಕೇಳಿ ಬರುತ್ತಿವೆ.

   ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಾಧೀಶರು, ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ. ಏಕೆಂದರೆ ಗೋರಿ ಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ಸೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಇರಿಸಿದರೂ ಅಷ್ಟೇ…ಎಂದು ಹೇಳಿದ್ದಾರೆ.

   ನ್ಯಾಯಾಧೀಶರ ಈ ಹೇಳಿಕೆಗೆ ವಿರೋಧಗಳು ವ್ಯಕ್ತವಾಗುತ್ತಿವೆ. ಸಾಂವಿಧಾನಿಕ ಹುದ್ದೆಯಲ್ಲಿರುವ, ಅದರಲ್ಲೂ ಜಾತ್ಯತೀತವಾಗಿ ವರ್ತಿಸಬೇಕಾದ ನ್ಯಾಯಾಧೀಶರು ಇಂತಹ ಹೇಳಿಕೆ ನೀಡುವುದು ಅವರ ಹುದ್ದೆ ಮೇಲಿನ ಭರವಸೆಯನ್ನು ಕಳಚುತ್ತದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

Recent Articles

spot_img

Related Stories

Share via
Copy link
Powered by Social Snap