ಇಸ್ರೇಲ್‌ ಮೇಲೆ ದಾಳಿ ಮಾಡಲು ಸಿದ್ದವಾದ ಇನ್ನೂ 2 ದೇಶ…..!

ನವದೆಹಲಿ

  ಪ್ಯಾಲೆಸ್ತೀನ್ ನ ಹಮಾಸ್ ಉಗ್ರರ ದಾಳಿಯಿಂದ ಕಂಗೆಟ್ಟಿರುವ ಇಸ್ರೇಲ್ ಮೇಲೆ ಇದೀಗ ಬಹು ರಾಷ್ಟ್ರೀಯ ದಾಳಿ ನಡೆಯುತ್ತಿದ್ದು, ಪ್ಯಾಲೆಸ್ತೀನ್ ನೊಂದಿಗಿನ ಯುದ್ಧ ಚಾಲ್ತಿಯಲ್ಲಿರುವಂತೆ ಮತ್ತೊಂದು ಬದಿಯಲ್ಲಿ ಲೆಬನಾನ್ ಮತ್ತು ಸಿರಿಯಾ ದೇಶಗಳೂ ಕೂಡ ಗಡಿಯಲ್ಲಿ ಇಸ್ರೇಲ್ ಸೇನೆ ಮೇಲೆ ದಾಳಿ ನಡೆಸಿವೆ.

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರವು ದಿನೇದಿನೆ ಕಾವೇರುತ್ತಿದೆ. ಇಸ್ರೇಲ್‌ ಮೇಲೆ ಪ್ಯಾಲೆಸ್ತೀನ್‌ ಉಗ್ರರು, ಗಾಜಾಪಟ್ಟಿ ಮೇಲೆ ಇಸ್ರೇಲ್‌ ಸೇನೆಯು ನಿರಂತರವಾಗಿ ದಾಳಿ ನಡೆಸುತ್ತಿದೆ. ಹಮಾಸ್‌ ಉಗ್ರರನ್ನು ನಿರ್ನಾಮ ಮಾಡಿಯೇ ತೀರುತ್ತೇವೆ ಎಂದು ಪಣ ತೊಟ್ಟಿರುವ ಇಸ್ರೇಲ್‌ ಈಗ ತನ್ನ ದಾಳಿ ತೀವ್ರಗೊಳಿಸಿದೆ.

    ಇದೀಗ ತಾಜಾ ಬೆಳವಣಿಗೆಯಲ್ಲಿ ಗಾಜಾಪಟ್ಟಿಯನ್ನು ನಾವು ವಶಪಡಿಸಿಕೊಂಡಿದ್ದೇವೆ ಎಂದು ಇಸ್ರೇಲ್ ಘೋಷಿಸಿದೆ. ರಾತ್ರೋರಾತ್ರಿ ಸುಮಾರು 200 ಕಟ್ಟಡಗಳನ್ನು ಗುರಿಯಾಗಿಸಿ ಇಸ್ರೇಲ್‌ನ ಯುದ್ಧವಿಮಾನಗಳು ಗಾಜಾಪಟ್ಟಿ ಮೇಲೆ ದಾಳಿ ನಡೆಸಿದ್ದು, ಇಡೀ ಗಾಜಾ ನಮ್ಮ ವಶವಾಗಿದೆ ಎಂದು ಇಸ್ರೇಲ್‌ ತಿಳಿಸಿದೆ.

    ಹಮಾಸ್‌ ಉಗ್ರರ ಕಟ್ಟಡಗಳು ಸೇರಿ ಪ್ರಮುಖ ಕಟ್ಟಡಗಳನ್ನು ಇಸ್ರೇಲೆ ಧರೆಗುರುಳಿಸಿದೆ. ಮತ್ತೊಂದೆಡೆ, ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಡೆಸಿದ ದಾಳಿಗೆ 1.8 ಲಕ್ಷ ನಾಗರಿಕರು ನಿರಾಶ್ರಿತರಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದು ಇಸ್ರೇಲ್‌ ದಾಳಿಯ ತೀವ್ರತೆಗೆ ಸಾಕ್ಷಿಯಾಗಿದೆ. 

    ಎರಡೂ ದೇಶಗಳಲ್ಲಿ ನಡೆಯುತ್ತಿರುವ ದಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ 3 ಸಾವಿರ ದಾಟಿದೆ ಎಂದು ತಿಳಿದುಬಂದಿದೆ. ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿರುವ ಕಾರಣ ಸಾವಿನ ಸಂಖ್ಯೆ ದಿಢೀರ್‌ ಏರಿಕೆಯಾಗಿದೆ ಎನ್ನಲಾಗಿದೆ. ಇಸ್ರೇಲ್‌ನಲ್ಲೂ ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. “ನಾವು ಯುದ್ಧ ಆರಂಭಿಸಿಲ್ಲ. ಆದರೆ ಮುಗಿಸುತ್ತೇವೆ” ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಈಗಾಗಲೇ ಘೋಷಿಸಿದ್ದಾರೆ. 

    ಪ್ಯಾಲೆಸ್ತೀನ್ ನ ಹಮಾಸ್ ಉಗ್ರರ ಮೇಲಿನ ಇಸ್ರೇಲ್ ಸೇನಾದಾಳಿ ಮುಂದುವರೆದಿರುವಂತೆಯೇ ಇತ್ತ ನಿನ್ನೆ ಸಂಜೆ ಸಿರಿಯಾ ಮತ್ತು ಲೆಬನಾನ್ ಪಡೆಗಳ ನಡುವೆಯೂ ತೀವ್ರ ಗುಂಡಿನ ಚಕಮಕಿ ನಡೆದಿದೆ. ಅಂತೆಯೇ ಸಿರಿಯಾದಿಂದ ಇಸ್ರೇಲಿ ಭೂಪ್ರದೇಶದ ಮೇಲೆ ಹಲವು ರಾಕೆಟ್ ದಾಳಿಗಳು ಕೂಡ ನಡೆಯುತ್ತಿದ್ದು, ಸಿರಿಯಾ ದಾಳಿಗೆ ಇಸ್ರೇಲ್ ಸೇನೆ ಕೂಡ ತನ್ನ ಫಿರಂಗಿ ಮತ್ತು ಮಾರ್ಟರ್ ಶೆಲ್‌ಗಳೊಂದಿಗೆ ತಕ್ಕ ಉತ್ತರ ನೀಡುತ್ತಿದ್ದಾರೆ ಎಂದು ಇಸ್ರೇಲಿ ಸೇನೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap