ಬೆಂಗಳೂರು:
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ 20ಕ್ಕೂ ಹೆಚ್ಚು ಕಡೆ ಶನಿವಾರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಬೆಂಗಳೂರಿನ ಬಿಲ್ಡರ್‌ಗಳ ಮನೆ ಮೇಲೆ ದಾಳಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಕೆಆರ್ ಪುರಂ, ಕೊಡಿಗೇಹಳ್ಳಿ ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ನಂಜುಂಡೇಶ್ವರ ಇನ್ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್ ಸೇರಿದಂತೆ ಹಲವು ಬಿಲ್ಡರ್ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಕಳೆದ ವಾರ ಬೆಂಗಳೂರಿನ ಮೇಘನಾ ಫುಡ್ಸ್ ಗ್ರೂಪ್ ಕಂಪನಿಗೆ ಸೇರಿದ 10ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದರು. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ನಡೆಸುತ್ತಿದ್ದು, ಇದರ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳಿವೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.
ಆದಾಯ ತೆರಿಗೆ ಇಲಾಖೆ ಒಂದು ಸ್ಥಳದಲ್ಲಿ ನಡೆಸುವ ಶೋಧ ಮತ್ತು ಸರ್ವೇಕ್ಷಣೆ ಕಾರ್ಯಾಚರಣೆಯನ್ನೇ ಐಟಿ ದಾಳಿ ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆ ಅಕ್ರಮವಾಗಿ ಹಣ ಇಟ್ಟುಕೊಂಡಿದ್ದು ತಿಳಿದುಬಂದರೆ ಅಥವಾ ಅನುಮಾನ ಬಂದರೆ ಐಟಿ ಇಲಾಖೆ ದಾಳಿ ಮಾಡುತ್ತದೆ.