ಶ್ರೀನಗರ :
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಶುಕ್ರವಾರ ಮಧ್ಯಾಹ್ನ 3:30 ರ ಸುಮಾರಿಗೆ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಪಾಕ್ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಗೊಂಡಿದ್ದ ಮೂವರು ಯೋಧರ ಪೈಕಿ, ಶನಿವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. ಈ ಯೋಧರ ತ್ಯಾಗಕ್ಕಾಗಿ ಸೇನೆ ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಹೇಳಿದ್ದಾರೆ.
ಇಡೀ ವಿಶ್ವವೇ ಕಿಲ್ಲರ್ ಕೊರೊನಾ ವಿರುದ್ಧ ಒಗ್ಗೂಡಿ ಹೋರಾಡುತ್ತಿದ್ದರೆ ಭಾರತದ ಮೇಲೆ ಸದಾ ವಿಷ ಕಾರುವ ಪಾಕಿಸ್ತಾನ ತನ್ನ ಕುತಂತ್ರದ ದ್ವೇಷಾಸೂಯೆಯನ್ನು ಮತ್ತೊಮ್ಮೆ ಸಾಬೀತು ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
