ಬೆಂಗಳೂರು
ಜೆ.ಪಿ. ನಡ್ಡಾ ಅವರು ಹುಬ್ಬಳ್ಳಿಯಲ್ಲಿಂದು ಮೂರುಸಾವಿರ ಮಠಕ್ಕೆ ಭೇಟಿ ನೀಡಿ, ಮಠದ ಸ್ವಾಮೀಜಿ ಗುರು ಸಿದ್ಧೇಶ್ವರ ಮಹಾಸ್ವಾಮಿ ಜೊತೆ ಮುಂಬರುವ ವಿಧಾನಸಭೆ ಚುನಾವಣೆ ಕುರಿತು ಚರ್ಚೆ ನಡೆಸಿದರು.
ಬಿಜೆಪಿ ವೀರಶೈವ ಸಮುದಾಯದ ಹಿತ ರಕ್ಷಣೆಗೆ ಬದ್ಧವಾಗಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವಂತೆ ತಮ್ಮ ಅನುಯಾಯಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರುಸಿದ್ಧೇಶ್ವರ ಮಹಾಸ್ವಾಮೀಜಿ, ಮೋದಿ ಸರ್ಕಾರ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲಿ ಶ್ರಮಿಸುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ಕರ್ನಾಟಕಕ್ಕೆ ಅನೇಕ ಯೋಜನೆಗಳನ್ನು ತಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯವನ್ನು ಮುನ್ನಡೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಇಂದು ಉತ್ತಮ ನಾಯಕತ್ವದಲ್ಲಿ ನಮ್ಮ ಹಿಂದೂ ಧರ್ಮ, ಸಂಸ್ಕೃತಿಯನ್ನು ಶತಮಾನಗಳಷ್ಟು ಮುಂದೆ ಕೊಂಡೊಯ್ಯುವ ಕೆಲಸ ನಡೆಯಬೇಕಿದೆ. ಹಿಂದೂ ಪರಂಪರೆಯೊAದಿಗೆ ರಾಷ್ಟç ಪ್ರಗತಿ ಕಾರ್ಯಕ್ಕೆ ಮಠದ ವತಿಯಿಂದ ಶುಭಕಾಮನೆಗಳು ಎಂದು ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು.
ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
